ಮಣಿಪಾಲ: ದರೋಡೆ ಪ್ರಕರಣದ ಆರೋಪಿ ನೇಣಿಗೆ ಶರಣು

ಮಣಿಪಾಲ: ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂರು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಕೋಟೆ ಗ್ರಾಮದಲ್ಲಿ ನಡೆದಿದೆ.

ಕೋಟೆ ಗ್ರಾಮದ ಪೀಟರ್ ಡಿಸಿಲ್ವಾ ಎಂಬವರ ಪುತ್ರ ಆತೀಶ್ ಡಿಸಿಲ್ವಾ (24) ಆತ್ಮಹತ್ಯೆ ಮಾಡಿದ ಕೊಂಡಾತ. ಪೈಂಟಿಂಗ್ ಕೆಲಸ ನಿರ್ವಹಿಸುತ್ತಿದ್ದ ಈತ ಮಣಿಪಾಲದಲ್ಲಿ ರಾತ್ರಿ ಹೊತ್ತು ಬೈಕ್ನಲ್ಲಿ ಹೋಗುತ್ತಿದ್ದವರ ಅಡ್ಡಗಟ್ಟಿ ದರೋಡೆಗೈದ ಪ್ರಕರಣದ ಆರೋಪಿಯಾಗಿದ್ದು, ಮೂರು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಕಳೆದ ನವೆಂಬರ್‌ನಲ್ಲಿ ಬಿಡುಗಡೆಯಾಗಿದ್ದ. ಜೈಲಿನಿಂದ ಬಿಡುಗಡೆಯಾದ ಆತೀಶ್ ಸರಿಯಾಗಿ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದು ಚಿಂತೆಗೀಡದ್ದಂತೆ ಕಂಡು ಬರುತ್ತಿದ್ದ ಎಂದು ಮೃತ ಯುವಕನ ಅಣ್ಣ ದೂರಿನಲ್ಲಿ ತಿಳಿಸಿದ್ದಾರೆ.


ಭಾನುವಾರ ರಾತ್ರಿ ಕುಡಿದು ಬಂದು ಮಲಗಿದ್ದು ಸೋಮವಾರ ಬೆಳಿಗ್ಗೆ ಮನೆಯವರು ಎದ್ದು ನೋಡಿದಾಗ ತನ್ನು ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಕಾಪು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!