ಮಳೆಗಾಗಿ ನಾಗರಿಕರಿಂದ ಸಾಮೂಹಿಕ ಪ್ರಾರ್ಥನೆ

ಮಳೆ ಬಾರದೆ ಜಿಲ್ಲೆಯಲ್ಲಿ ನೀರಿನ ಅಭಾವ ದಿನದಿಂದ ‌ದಿನಕ್ಕೆ‌ ಬಿಗಾಡಯಿಸುತ್ತಿದ್ದು ಇಂದು ಶಾಸಕ‌ ರಘುಪತಿ ‌ಭಟ್‌ ನೇತ್ರತ್ವದಲ್ಲಿ ಜಿಲ್ಲೆಯ ನಾಗರಿಕರಿಂದ ಸಾಮೂಹಿಕವಾಗಿ ದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು.‌

ಉಡುಪಿ ಪಲಿಮಾರು ಮಠದ ಪರ್ಯಾಯ ಶ್ರೀಗಳಾದ ವಿದ್ಯಾದೀಶತೀರ್ಥ ಸ್ವಾಮೀಜಿ,ಹಾಗೂ  ಅದಮಾರು ಮಠದ ಈಶಪ್ರಿಯ ಸ್ವಾಮೀಜಿಯವರು ಉಡುಪಿಯ ಶ್ರೀ ಕೃಷ್ಣ ಮಠ, ಅನಂತೇಶ್ವರ ದೇವಸ್ಥಾನ ಹಾಗೂ ಚಂದ್ರಮೌಳಿಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಶಾಸಕರ ಕೆ ರಘುಪತಿ ಭಟ್ ಹಾಗೂ ಅವರ ಧರ್ಮಪತ್ನಿ ಶಿಲ್ಪಾ ೂಡ ಈ ಸಂದರ್ಭದಲ್ಲಿ ಜೊತೆಗಿದ್ದು ಒಟ್ಟಿಗೆ ಸೇರಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ನಗರ ಬಿಜೆಪಿ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ನಗರ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ದಾವೂದ್ ಅಬೂಬಕರ್, ನಗರ ಬಿಜೆಪಿ ಕಾರ್ಯದರ್ಶಿ ಜಗದೀಶ್ ಆಚಾರ್ಯ,  ನಗರಸಭೆಯ ಚುನಾಯಿತ ಸದಸ್ಯರುಗಳು, ಕಾರ್ಯಕರ್ತರು ಹಾಗೂ ನಾಗರಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ದೇವರಲ್ಲಿ ಪ್ರಾರ್ಥಿಸಿದರು ಮತ್ತು ವಿಷ್ಣು ಭಟ್ ಗುಂಡಿಬೈಲ್ ಅವರು ಕಾರ್ಯಕ್ರಮದ ನೇತೃತ್ವ ವಹಿಸಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!