ಫಲಿಮಾರು ಗ್ರಾಮ ಪಂಚಾಯತಿ ಗೆ ಕಾಂಗ್ರೆಸ್ ಅವಧಿಯಲ್ಲಿ ಗರಿಷ್ಠ ಅನುದಾನ; ಸೊರಕೆ

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವಿದ್ದ ಸಮಯದಲ್ಲಿ ನಾನು ಶಾಸಕನಾಗಿ,ಸಚಿವನಾಗಿದ್ದ ಸಮಯದಲ್ಲಿ ಅತ್ಯಂತ ಹೆಚ್ಚಿನ ಅನುದಾನವನ್ನು ಕ್ರೋಢೀಕರಿಸಿ ಗರಿಷ್ಟ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಫಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವುದು ನನಗೆ ಬಹಳ ಸಂತೃಪ್ತಿ ಕೊಟ್ಟಿರುವ ವಿಚಾರವಾಗಿರುತ್ತದೆ.

ಈ ಅಭಿವೃದ್ಧಿ ಕೆಲಸ-ಕಾರ್ಯಗಳನ್ನು ಜನರಿಗೆ ಮನವರಿಕೆಯಾಗುವಂತೆ ಪ್ರಚುರಪಡಿಸಿ,ಜನರ ವಿಶ್ವಾಸವನ್ನು ಗಳಿಸುವ ಪ್ರಯತ್ನ ಮಾಡಬೇಕೆಂದು ಮಾಜಿ ಸಚಿವ ಸನ್ಮಾನ್ಯ ವಿನಯ್ ಕುಮಾರ್ ಸೊರಕೆ ಕಾರ್ಯಕರ್ತರಿಗೆ ತಿಳಿಸಿದರು.

ಅವರು ಫಲಿಮಾರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತ, ಬೂತ್ ಮಟ್ಟದಲ್ಲಿ ಪಕ್ಷ ಬಸಲಿಷ್ಠವಾದರೆ ಮಾತ್ರ ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿಯೂ ಗೆಲುವು ಸಾಧಿಸಿ ಅಧಿಕಾರ ಉಳಿಸಿಕೊಳ್ಳ ಬಹುದು, ಆ ನಿಟ್ಟಿನಲ್ಲಿ ಕಾರ್ಯಕರ್ತರೆಲ್ಲರೂ ಪಕ್ಷದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸುವುದರ ಜೊತೆಗೆ ಪಕ್ಷಕ್ಕೆ ಇನ್ನಷ್ಟು ಮತದಾರರನ್ನು ಸೆಳೆಯ ಬಹುದೆಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಸಭಾಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನಚಂದ್ರ ಸುವರ್ಣ ಮಾತನಾಡಿ, ಫಲಿಮಾರು ಗ್ರಾಮ ಮುಂಚಿನಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದು ಇಲ್ಲಿ ಬಿ. ಜೆ. ಪಿ ಗೆ ಅಸ್ತಿತ್ವವೇ ಇರಲಿಲ್ಲ. ಕಾರ್ಯಕರ್ತರು ಇನ್ನಷ್ಟು ಸಕ್ರಿಯರಾದರೆ ಕಾಂಗ್ರೆಸ್ ನ ಭದ್ರಕೋಟೆಯನ್ನು ಮರಳಿ ಭದ್ರಪಡಿಸ ಬಹುದು ಎಂದರು.

ಗ್ರಾಮೀಣ ಸಮಿತಿ ಅಧ್ಯಕ್ಷ ಕರುಣಾಕರ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷ ಜಿತೇಂದ್ರ ಫುರ್ತಾದೋ, ಎಂ. ಪಿ ಮೊಇದಿನಬ್ಬ, ಗೋಪಾಲ್ ಪೂಜಾರಿ, ಬ್ಲಾಜ್ ಪ್ರ.ಕಾರ್ಯದರ್ಶಿಗಳಾದ ಅಮೀರ್ ಮೊಹಮ್ಮದ್, ಪ್ರಶಾಂತ್ ಜತ್ತಣ್, ರೋಹನ್ ಕುತ್ಯಾರ್, ಮುಖಂಡರುಗಳಾದ ದೀಪಕ್ ಎರ್ಮಾಳ್, ವೈ. ಸುಧೀರ್, ಗ್ರಾಮ್ ಪಂಚಾಯತ್ ಸದದ್ಯರುಗಳು, ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ತಾಲೂಕ ಪಂಚಾಯತ್ ಸದಸ್ಯ ದಿನೇಶ್ ಕೋಟ್ಯಾನ್ ಸ್ವಾಗತಿಸಿದರು, ಯೋಗಾನಂದ್ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!