ಮಹಾನಗರ ಪಾಲಿಕೆ ಚುನಾವಣೆ : ಅಭ್ಯರ್ಥಿಗಳ ಪರ ಐವನ್ ,ರೈ,ಸೊರಕೆ ಬಿರುಸಿನ ಮತ ಬೇಟೆ

 
ಮಂಗಳೂರು : ತೀವ್ರ ಕುತೂಹಲ ಕೆರಳಿಸಿರುವ ಮಹಾನಗರ ಪಾಲಿಕೆಯ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇರುವಂತೆ ಕಾಂಗ್ರೆಸ್ ಬಿಜೆಪಿ ಪಕ್ಷದ ಘಟಾನುಘಟಿ ನಾಯಕರುಗಳು ತಮ್ಮ ಅಭ್ಯರ್ಥಿ ಪರ ಮತಯಾಚನೆ ಮಾಡುತ್ತಿದ್ದಾರೆ.
ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ತನ್ನ ಸ್ವಕ್ಷೇತ್ರದಲ್ಲಿಯೇ ಅಗ್ನಿಪರೀಕ್ಷೆಯಾಗಿದ್ದು, ರಾಜ್ಯಾಧ್ಯಕ್ಷ ಆದ ಬಳಿಕ ಮೊದಲ ಚುನಾವಣೆಯಾಗಿರುವುದರಿಂದ, ನಳಿನ್ ಕುಮಾರ್ ಕಟೀಲ್ ಅವರಿಗೆ ತೀವ್ರ ಅಗ್ನಿ ಪರೀಕ್ಷೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಶಾಸಕರುಗಳ ಮೇಲುಗೈಯಾದರೂ, ಈ ಚುನಾವಣೆ ಸ್ಥಳೀಯ ನಾಯಕರುಗಳ ವರ್ಚಸ್ಸನ್ನು ಆಧರಿಸಿ ಚುನಾವಣೆ ನಡೆಯುವುದರಿಂದ ಸ್ಥಳೀಯ ಭಿನ್ನಮತವನ್ನು ದೂರ ಮಾಡಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಮತಯಾಚನೆ ಮಾಡುತ್ತಿದ್ದಾರೆ. 
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರುಗಳು ಸೋಲನ್ನನುಭವಿಸಿದರೂ, ಮಹಾನಗರ ಪಾಲಿಕೆಯಲ್ಲಿ ತನ್ನ ಆಡಳಿತದಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದಿಟ್ಟು ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಅಭ್ಯರ್ಥಿಗಳ ಪರ ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರುಗಳು ಮತಯಾಚನೆ ಮಾಡುತ್ತಿದ್ದಾರೆ.


ಅಭ್ಯರ್ಥಿಗಳ ಆಯ್ಕೆಯಲ್ಲಿ ಮೇಲುಗೈ ಸಾಧಿಸಿರುವ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ತನ್ನೆಲ್ಲಾ ಪ್ರಭಾವವನ್ನು ಬಳಸಿ, ತಾನು ಮಾಡಿದ ಸಾಧನೆಗಳು, ಅಭಿವೃದ್ಧಿ ಕೆಲಸಗಳನ್ನು ಜನರಿಗೆ ತಲುಪಿಸುವಲ್ಲಿ ಅವಿರತ ಶ್ರಮ ಪಡುತ್ತಿದ್ದಾರೆ. ಬಹುತೇಕ ಎಲ್ಲ ವಾರ್ಡುಗಳಲ್ಲಿ ಸಂಚಲನ ಮಾಡಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡುತ್ತಿರುವ ಐವನ್, ಈ ಬಾರಿ ಕಾಂಗ್ರೆಸ್ ಆಡಳಿತ ಬರುವಲ್ಲಿ ಜನರ ಮನಸ್ಸು ಗೆಲ್ಲುವಲ್ಲಿ ಶ್ರಮವಹಿಸುತ್ತಿದ್ದಾರೆ.


ಮಾಜಿ ಸಚಿವರಾದ ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕರುಗಳಾದ ಜೆ ಆರ್ ಲೋಬೋ, ಶಕುಂತಳಾ ಶೆಟ್ಟಿ, ಮೊಯ್ದಿನ್ ಬಾವ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸಹಿತ ವಿವಿಧ ಘಟಾನುಘಟಿ ನಾಯಕರುಗಳು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮನೆ ಮನೆಗೆ ತೆರಳಿ ಬಿರುಸಿನ ಮತಯಾಚನೆ ಮಾಡುತ್ತಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ 60 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 38 ಮತ್ತು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 22 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಕಳೆದ ಬಾರಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತವಿದ್ದು, ಈ ಬಾರಿ ಆಡಳಿತ ಯಾರ ಪಾಲಾಗುತ್ತೆ?  ಜನರ ಆಶೀರ್ವಾದ ಯಾವ ಪಕ್ಷಕ್ಕೆ ದೊರೆಯುತ್ತದೆ ಎಂದು ಕಾದು ನೋಡಬೇಕಾಗಿದೆ.

1 thought on “ಮಹಾನಗರ ಪಾಲಿಕೆ ಚುನಾವಣೆ : ಅಭ್ಯರ್ಥಿಗಳ ಪರ ಐವನ್ ,ರೈ,ಸೊರಕೆ ಬಿರುಸಿನ ಮತ ಬೇಟೆ

  1. ನಿದ್ದೆಯಲ್ಲಿರುವ ಜೆ.ಆರ್.ಲೋಬೊ ಚುನಾವಣೆ ಬರುವಾಗ ಎದ್ದು ನಿಂತು ನಾನು ವಿಧಾನ ಸಬಾ ಆಕಾಂಶಿ ಹೇಳಿ ಕೊಂಡು ಬರಲಿಕ್ಕೆ ಮಾತ್ರ ಅಲ್ಲ ಐವನ್, ರಮಾನಾಥ್ ರೈ, ವಿನಾಯ್ ಕುಮಾರ್ ಸೊರಕೆ ಇವರ ಹಾಗೆ ಕೆಲಸ ಮಾಡಿ

Leave a Reply to Michael Ramesh Cancel reply

Your email address will not be published. Required fields are marked *

error: Content is protected !!