ಗಣಪತಿ ಸನ್ನಿಧಿಯಲ್ಲಿ `ಬ್ರಹ್ಮಚಾರಿ’ ಚಿತ್ರಕ್ಕೆ ಚಾಲನೆ

ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ ಬ್ರಹ್ಮಾಚಾರಿ ಚಿತ್ರದ ಮುಹೂರ್ತ ಸಮಾರಂಭ ಏಪ್ರಿಲ್ 14ರ ಭಾನುವಾರ ಬಸವೇಶ್ವರ ನಗರದ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ನಟ ಧ್ರುವ ಸರ್ಜಾ, ನಿರ್ದೇಶಕರಾದ ವಿಜಯ್ ಕಿರಣ್, ಶಿವತೇಜಸ್, ಮಹೇಶ್(ಅಯೋಗ್ಯ) ಮುಂತಾದ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.
ಯು ಕೆ ಮೆಹ್ತ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಚಂದ್ರಮೋಹನ್ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ಡಬ್ಬಲ್ ಇಂಜಿನ್ ಹಾಗೂ ಬಾಂಬೆ ಮಿಠಾಯಿ ಚಿತ್ರಗಳನ್ನು ಚಂದ್ರಮೋಹನ್ ನಿರ್ದೇಶಿಸಿದ್ದಾರೆ. ಕಾಮಿಡಿ ಹಾಗೂ ಕೌಟುಂಬಿಕ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಬೆಂಗಳೂರು, ಶ್ರೀರಂಗಪಟ್ಟಣದಲ್ಲಿ ಚಿತ್ರಕ್ಕೆ 35ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.
ರವಿಕುಮಾರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಧರ್ಮವಿಶ್ ಸಂಗೀತ ನೀಡುತ್ತಿದ್ದಾರೆ. ಅರ್ಜುನ್ ಕಿಟ್ಟು ಸಂಕಲನ, ಮುರ್ಳಿ ನೃತ್ಯ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ, ಪ್ರಕಾಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ನೀನಾಸಂ ಸತೀಶ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸುತ್ತಿದ್ದಾರೆ. ಶಿವರಾಜ್ ಕೆ.ಆರ್.ಪೇಟೆ, ಅಶೋಕ್, ಆಕಾಂಕ್ಷ, ಅಚ್ಯುತಕುಮಾರ್, ಪದ್ಮಜಾರಾವ್, ದತ್ತಣ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!