ಮೈಸೂರು:ಜಂಬೂ ಸವಾರಿಗೆ ಕ್ಷಣಗಣನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಸಾಂಸ್ಕೃತಿಕ ನಗರಿಯಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ದೇಶ ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಜಂಬೂ ಸವಾರಿ ಕಣ್ತುಂಬಿಗೊಳ್ಳಲು ನಗರಕ್ಕೆ ಆಗಮಿಸಿದ್ದಾರೆ.


ಅರಮನೆ ನಗರಿ ಮೈಸೂರು ಸಂಪೂರ್ಣ ಶೃಂಗಾರಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಜಂಬೂ ಸವಾರಿ ಮೆರವಣಿಗೆ ಮೈಸೂರು ಅರಮನೆಯಿಂದ 5 ಕಿ.ಮೀ.ದೂರದಲ್ಲಿರುವ ಬನ್ನಿಮಂಟಪದವರೆಗೂ ಸಾಗಲಿದೆ. ಕ್ಯಾಪ್ಟನ್ ಅರ್ಜುನ 750 ಕೆ.ಜಿ.ತೂಕದ ಚಿನ್ನದ ಅಂಬಾರಿ ಹೊತ್ತು ರಾಜ ಗಾಂಭೀರ್ಯದಿಂದ ಸಾಗಲಿದ್ದಾನೆ. ಜಂಬೂ ಸವಾರಿ ಮೆರವಣಿಗೆಯಲ್ಲಿ ನಾಡಿನ ಕಲೆ, ಸಂಸ್ಕೃತಿಯನ್ನು ಬಿಂಬಿಸುವ 39 ಸ್ತಬ್ಧಚಿತ್ರಗಳೊಂದಿಗೆ ವಿವಿಧ ಜಾನಪದ ಕಲಾತಂಡಗಳು ಭಾಗಿಯಾಗಲಿದೆ.

Leave a Reply

Your email address will not be published. Required fields are marked *

error: Content is protected !!