ಸಾಲಿಹಾತ್ ಶಾಲಾ ವಿಧ್ಯಾರ್ಥಿ ಸಂಸತ್ತು ಉದ್ಘಾಟನೆ
ಉಡುಪಿ: ಸಾಲಿಹಾತ್ ಶಾಲಾ ವಿದ್ಯಾರ್ಥಿ ಸಂಸತ್ತು ಶನಿವಾರ ಸಾಲಿಹಾತ್ ಸಭಾಂಗಣದಲ್ಲಿ ನಡೆಯಿತು. ಉದ್ಘಾಟಿಸಿ ಮಾತನಾಡಿದ ಉಡುಪಿ ನಗರಸಭಾ ಸದಸ್ಯ ರಮೇಶ್ ಕಾಂಚನ್ ವಿಧ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಮತ್ತು ಶಿಸ್ತು ಮೈಗೂಡಿಸಿಕೊಳ್ಳಲು ವಿಧ್ಯಾರ್ಥಿ ಸಂಸತ್ತಿನ ರೂಪಣೆ ಸಹಾಯಕವಾಗುತ್ತದೆ. ಹಾಗೆಯೇ ವಿದ್ಯಾರ್ಥಿಗಳು ಸಕಾರಾತ್ಮಕ ರಾಜಕೀಯ ಪ್ರಜ್ಞೆ ಮೈಗೂಡಿಸಿಕೊಂಡು ಮುಂದಿನ ದಿನಗಳಲ್ಲಿ ಉತ್ತಮ ರಾಜಕೀಯ ನಾಯಕತ್ವಕ್ಕೆ ಋಣಿಯಾಗಬೇಕಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಾಲಿಹಾತ್ ವಿದ್ಯಾಸಂಸ್ಥೆಗಳ ಉಪಾಧ್ಯಕ್ಷರಾದ ಇದ್ರೀಸ್ ಹೂಡೆ ಸಾಂದರ್ಭಿಕ ಮಾತುಗಳನ್ನಾಡಿದರು.
ಪ್ರೌಢಶಾಲಾ ಮುಖ್ಯಸ್ಥೆ ಸುನಂದಾರವರು ಪ್ರಾಸ್ತವಿಕ ನುಡಿಗಳನ್ನಾಡಿದರು. ಉದ್ಘಾಟಕರಾದ ರಮೇಶ್ ಕಾಂಚನ್’ರವರು ವಿದ್ಯಾರ್ಥಿ ನಾಯಕರುಗಳ ಪ್ರತಿಜ್ಞಾ ವಿಧಿಯನ್ನು ನೆರವೇರಿಸಿದರು. ಶಾಲಾ ಆಡಳಿತಾಧಿಕಾರಿ ಅಸ್ಲಮ್ ಹೈಕಾಡಿ, ಆಯ್ಕೆಯಾದ ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಧ್ಯಾಪಕಿ ಶೈಲಾ ಮಸ್ಕರೇಜ್ಞಸ್ ಕಾರ್ಯಕ್ರಮ ನಿರೂಪಿದರು. ಈ ಸಂದರ್ಭದಲ್ಲಿ ಸಾಹಿತ್ಯ, ವಿಜ್ಞಾನ, ಪರಿಸರ ಸಂಘಗಳ ಉದ್ಘಾಟನೆಯೂ ನಡೆಯಿತು. ಸಭಾ ಕಾರ್ಯಕ್ರಮದ ನಂತರ ವಿಧ್ಯಾರ್ಥಿಗಳ ವಿವಿಧ ಕಾರ್ಯಕ್ರಮಗಳು ನಡೆದವು.