ನಿರ್ಭಯಾ ಗ್ಯಾಂಗ್ ರೇಪ್: ನಾಲ್ವರು ಅತ್ಯಾಚಾರಿಗಳಿಗೆ ಮರಣದಂಡನೆ

ನವದೆಹಲಿ: 2012ರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇಂದು ನ್ಯಾಯ ದೊರಕಿದೆ. ನಿರ್ಭಯಾ ಪ್ರಕರಣದ ದೋಷಿಗಳಿಗೆ ಇಂದು ಬೆಳಗ್ಗೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗಿದೆ. ಅಪರಾಧಿಗಳಾದ ವಿನಯ್ ಕುಮಾರ್, ಅಕ್ಷಯ್ ಠಾಕೂರ್ ಮತ್ತು ಮುಕೇಶ್ ಸಿಂಗ್  ಹಾಗೂ ಪವನ್ ಗುಪ್ತಾ ಕೊನೆಯವರೆಗೂ ಕಾನೂನು ಹೋರಾಟ ನಡೆಸಿದರೂ ಸಾವಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಇಂದು ಮುಂಜಾನೆ 5-30ರಲ್ಲಿ  ತಿಹಾರ್ ಜೈಲಿನಲ್ಲಿ ನೇಣುಗಂಬಕ್ಕೆ ಏರಿಸಲಾಗಿದೆ. ಇದರೊಂದಿಗೆ ಏಳು ವರ್ಷಗಳಿಂದ ನಡೆದ ಬೃಹನ್ನಾಟಕಕ್ಕೆ ತೆರೆ ಬಿದ್ದಿದೆ
ಇಂದು ಬೆಳಗಿನ ಜಾವ ಮೂರು ಗಂಟೆವರೆಗೂ ದೋಷಿಗಳು ಡೆತ್ ವಾರೆಂಟ್ ಮುಂದೂಡಲು ಪ್ರಯತ್ನಿಸಿದ್ದರು. ಪಟಿಯಾಲಾ ಹೌಸ್ ಕೋರ್ಟ್ ನೀಡಿರುವ ಡೆತ್ ವಾರೆಂಟ್ ಗೆ ತಡೆ ನೀಡುವಂತೆ ಗುರುವಾರ ರಾತ್ರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ನಲ್ಲಿ ಅರ್ಜಿ ವಜಾಗೊಳ್ಳುತ್ತಿದ್ದಂತೆ ಮಧ್ಯರಾತ್ರಿ ಸುಪ್ರೀಂಕೋರ್ಟ್ ಗೆ ಹೋಗಿ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ದೋಷಿಗಳು ಮನವಿ ಮಾಡಿಕೊಂಡಿದ್ದರು. ಮಧ್ಯರಾತ್ರಿ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಾದ-ಪ್ರತಿವಾದವನ್ನು ಆಲಿಸಿತು. ತದನಂತರ ಅರ್ಜಿಯನ್ನು ವಜಾಗೊಳಿಸಿತು. ಇತ್ತ ಅರ್ಜಿ ವಜಾಗೊಳ್ಳುತ್ತಿದ್ದಂತೆ ತಿಹಾರ್ ಜೈಲಿನ ಮುಂದೆ ಜನ ಸೇರಲು ಆರಂಭಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ತಿಹಾರ ಜೈಲಿನ ಆವರಣದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.

ಮಧ್ಯರಾತ್ರಿ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಾದ-ಪ್ರತಿವಾದವನ್ನು ಆಲಿಸಿತು. ತದನಂತರ ಅರ್ಜಿಯನ್ನು ವಜಾಗೊಳಿಸಿತು. ಇತ್ತ ಅರ್ಜಿ ವಜಾಗೊಳ್ಳುತ್ತಿದ್ದಂತೆ ತಿಹಾರ್ ಜೈಲಿನ ಮುಂದೆ ಜನ ಸೇರಲು ಆರಂಭಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ತಿಹಾರ ಜೈಲಿನ ಆವರಣದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.

ಅತ್ಯಾಚಾರ ಎಸಗಿರುವ ಕಾಮುಕರಿಗೆ ತಕ್ಕ ಶಿಕ್ಷೆಯಾಗಿದೆ. ನಾಳೆ ಮುಂಜಾನೆ ಉದಯಿಸುವ ಸೂರ್ಯ ಹೊಸ ಭರವಸೆಗೆ ಸಾಕ್ಷಿಯಾಗುತ್ತಾನೆ. ನಮ್ಮ ಮಗಳ ಆತ್ಮಕ್ಕೆ ಈಗ ಶಾಂತಿ ಸಿಕ್ಕಿದೆ ಎಂದು ನಿರ್ಭಯಾ ತಾಯಿ ತಿಳಿಸಿದ್ದಾರೆ. 

ಗಲ್ಲು ವಿಧಿಸುವ ದಿನ ಪ್ರಕ್ರಿಯೆ ಹೇಗಿರುತ್ತೆ?
1. ಮರಣದಂಡನೆ ವಿಧಿಸುವ ದಿನ ಜೈಲು ಎಸ್‍ಪಿ, ಡಿಎಸ್‍ಪಿ ಕೈದಿ ಇರುವ ಸೆಲ್‍ಗೆ ಹೋಗಿ ಈತನೇ ಮರಣದಂಡನೆಗೆ ಗುರಿಯಾಗಿರುವ ಕೈದಿ ಎಂದು ಖಚಿತಪಡಿಸಿಕೊಳ್ಳಬೇಕು.
2. ಕೈದಿ ಎದುರು ಮರಣದಂಡನೆ ಜಾರಿ ಆದೇಶ ಪ್ರತಿಯನ್ನು ಓದಬೇಕು.
3. ಇದಾದ ತರುವಾಯ ಕೈದಿಯಿಂದ ದಾಖಲೆಗಳಿಗೆ ಸಹಿ ಪಡೆದುಕೊಳ್ಳಬೇಕು.
4. ಕೈದಿಯ 2 ಕಾಲುಗಳನ್ನು ಕಬ್ಬಿಣದ ಸಂಕೋಲೆಯಿಂದ ಬಂಧಿಸಿದ್ದಲ್ಲಿ ಅದನ್ನು ತೆಗೆಯಬೇಕು.
5. ಕೈದಿಯನ್ನು ಗಲ್ಲು ಪೀಠದ ಕಡೆಗೆ ಕರೆದೊಯ್ಯುವ ಹೊಣೆ ಡಿಎಸ್‍ಪಿಯದ್ದು.
6. ಕೈದಿಗೆ ಜೈಲಿನ ಹೆಡ್ ವಾರ್ಡರ್ ಮತ್ತು ಆರು ಮಂದಿ ವಾರ್ಡರ್ ಕಾವಲು
7. ವಾರ್ಡರ್ ಗಳಲ್ಲಿ ಇಬ್ಬರು ಕೈದಿಯ ಹಿಂಭಾಗದಲ್ಲೂ, ಇಬ್ಬರು ಮುಂಭಾಗದಲ್ಲೂ. ಉಳಿದಿಬ್ಬರು ಕೈದಿಯ ಎರಡೂ ಕೈಗಳನ್ನು ಬಿಗಿಯಾಗಿ ಹಿಡಿದುಕೊಂಡು ವಧಾಪೀಠದ ಬಳಿಗೆ ಕರೆದುಕೊಂಡು ಬರುತ್ತಾರೆ.
8. ಕೈದಿಯನ್ನು ನಿಖರವಾಗಿ ನೇಣಿನ ಕೆಳಗೆ ನಿಲ್ಲಿಸುತ್ತಾರೆ.
9. ಗಲ್ಲಿಗೂ ಮೊದಲು ಕೊನೆಯದಾಗಿ ಕೈದಿಗೆ ಮರಣದಂಡನೆ ಜಾರಿ ಆದೇಶವನ್ನು ಓದಿ ಹೇಳಲಾಗುತ್ತದೆ.
10. ನಂತರ ಕೈದಿಯ ಎರಡೂ ಕಾಲುಗಳನ್ನು ಬಿಗಿಯಾಗಿ ಕಟ್ಟಿ ಆತನ ತಲೆಗೆ ಕಪ್ಪು ಬಣ್ಣದ ಬಟ್ಟೆ ಹಾಕಲಾಗುತ್ತದೆ.
11. ಕೈದಿ ಕುತ್ತಿಗೆಗೆ ನೇಣು ಹಗ್ಗವನ್ನು ಇಳಿಸಲಾಗುತ್ತದೆ
12. ಈ ನೇಣು ಹಗ್ಗ ಕುತ್ತಿಗೆಯ ಮಧ್ಯ ಭಾಗದ 1.5 ಇಂಚು ಎಡ ಅಥವಾ ಬಲ ಭಾಗಕ್ಕೆ ವಾಲಿರಬೇಕು.
13. ಈ ಪ್ರಕ್ರಿಯೆ ಮುಗಿದ ಬಳಿಕ ಇಬ್ಬರೂ ವಾರ್ಡರ್ ಗಳು ಕೈದಿಯನ್ನು ವಧಾ ಸ್ಥಳದಲ್ಲಿ ಬಿಟ್ಟು ತೆರಳುತ್ತಾರೆ.
14. ಎಸ್‍ಪಿ ಸಿಗ್ನಲ್ ಕೊಟ್ಟ ನಂತರ ವಧಾಕಾರ (ಹ್ಯಾಂಗ್ ಮ್ಯಾನ್) ಗಲ್ಲು ಬಿಗಿಗೊಳಿಸುತ್ತಾರೆ.
15. ಗಲ್ಲು ಶಿಕ್ಷೆ ವಿಧಿಸಿದ 30 ನಿಮಿಷದವರೆಗೂ ದೇಹವನ್ನು ಮೇಲೆತ್ತುವಂತಿಲ್ಲ
16. ಜೈಲಿನ ವೈದ್ಯಾಧಿಕಾರಿ ಪ್ರಾಣ ಹೋಗಿದೆಯೆಂದು ಧೃಡಪಡಿಸಿದ ನಂತರ ದೇಹ ಮೇಲಕ್ಕೆತ್ತಲಾಗುತ್ತದೆ
17. ಕೈದಿಯ ಮೃತದೇಹವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.
18. ಒಂದು ವೇಳೆ ಕೈದಿಯ ಕುಟುಂಬಸ್ಥರು ಶವವನ್ನು ತೆಗೆದುಕೊಳ್ಳದೇ ಇದ್ದಲ್ಲಿ ಆಗ ಜೈಲಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.

Leave a Reply

Your email address will not be published. Required fields are marked *

error: Content is protected !!