ನಿಟ್ಟೂರು ಪ್ರೌಢಶಾಲೆಯಲ್ಲಿ ವಚನ ದಿನಾಚರಣೆ
ಉಡುಪಿ : ನಿಟ್ಟೂರು ಪ್ರೌಢಶಾಲೆಯಲ್ಲಿ ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ವಚನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ| ನಿರಂಜನ ಚೋಳಯ್ಯ, ಉಡುಪಿ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀ ಮೇಟಿ ಮುದಿಯಪ್ಪ ಅತಿಥಿಗಳಾಗಿ ಭಾಗವಹಿಸಿದರು.
ಶ್ರೀ ಸುತ್ತೂರು ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಅತಿಥಿಗಳು ಪುಷ್ಪಾರ್ಚನೆ ಗೈಯುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಡಾ| ನಿರಂಜನ ಚೋಳಯ್ಯ ಪ್ರಾಸ್ತಾವಿಕ ಮಾತನ್ನಾಡಿದರು.
ಶಿಕ್ಷಕ ದೇವದಾಸ ಶೆಟ್ಟಿ ‘ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು’ ಎನ್ನುವ ವಿಷಯದ ಕುರಿತು ಮಾತನಾಡಿದರು. ಶ್ರೀ ಮೇಟಿ ಮುದಿಯಪ್ಪ ನಿತ್ಯ ಜೀವನದಲ್ಲಿ ವಚನ ಸಾಹಿತ್ಯದ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅತೀ ಅಗತ್ಯವೆಂದರು. ಈ ಸಂದರ್ಭದಲ್ಲಿ ವಚನ ಗಾಯನ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ವಿದ್ಯಾರ್ಥಿಗಳಾದ ನಿಶ್ವಿತಾ ನಾಯ್ಕ್, ಪೂರ್ಣಿಮ, ದೀಪಿಕಾ ವಿವಿಧ ವಚನಗಾರರ ಕುರಿತು ಮಾತನಾಡಿದರು, ಮುಖ್ಯೋಪಾಧ್ಯಾಯ ಮುರಲಿ ಕಡೆಕಾರ್ ಸ್ವಾಗತಿಸಿದರು. ಕು| ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಮೊಹಿಝ ಬಾನು ವಂದಿಸಿದರು.