ಪೌಷ್ಠಿಕ ಕೈತೋಟ ತರಬೇತಿ ಕಾರ್ಯಕ್ರಮ : ಬ್ರಹ್ಮಾವರ
ಬ್ರಹ್ಮಾವರ: ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರ ಮತ್ತು ಜ್ಞಾನ ವಿಕಾಸ ಕೇಂದ್ರ ಸಮನ್ವಯ ಸಮಿತಿ ಕರ್ಜೆ ಮತ್ತು ಉಪ್ಪಿನ ಕೋಟೆ ವಲಯ ಇವರ ಸಂಯುಕ್ತಾಶ್ರಯದಲ್ಲಿ ಪೌಷ್ಠಿಕ ಕೈತೋಟ ತರಬೇತಿ ಕಾರ್ಯಕ್ರಮವನ್ನು ನಡೆಯಿತು.
ಡಿಪ್ಲೋಮಾ ಕೃಷಿ ಮಹಾ ವಿದ್ಯಾಲಯ, ಬ್ರಹ್ಮಾವರದ ಪ್ರಾಂಶುಪಾಲರಾದ ಡಾ.ಸುಧೀರ್ ಕಾಮತ್, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಸಾವಯವ ಪದ್ದತಿಯಲ್ಲಿ ಬೆಳೆದ ತರಕಾರಿಗಳ ಪಾತ್ರ ಬಹು ಮುಖ್ಯವಾಗಿರುತ್ತದೆ ಎಂದು ವಿವರಿಸಿದರು. ಮಾರುಕಟ್ಟೆಯಲ್ಲಿ ದೊರೆಯುವ ತರಕಾರಿಗಳ ದರವು ಹೆಚ್ಚಿದ್ದು ರಾಸಾಯನಿಕ ಅಂಶಗಳಿಂದ ಕೂಡಿರುತ್ತದೆ ಹಾಗೂ ಆ ತರಕಾರಿಯನ್ನು ಸೇವಿಸಿದಾಗ ಅರೋಗ್ಯದಲ್ಲಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಕೆವಿಕೆಯ ಮುಖ್ಯಸ್ಥರಾದ ಡಾ.ಬಿ. ಧನಂಜಯ ಇವರು ಕೃಷಿ ವಿಜ್ಞಾನ ಕೇಂದ್ರದಿಂದ ಪ್ರತಿ ವರ್ಷವೂ ಈ ರೀತಿ ಹಲವಾರು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಆದ್ದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತರಬೇತಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕಾಗಿ ವಿನಂತಿಸಿದರು.