ಪ್ರಾಥಮಿಕ ತರಗತಿಯ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಅನಗತ್ಯ: ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಆನ್ ಲೈನ್ ಶಿಕ್ಷಣದ ಹೆಸರಿನಲ್ಲಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಶಿಕ್ಷಣ ಸಂಸ್ಥೆಗಳು ಶೋಷಣೆ ಮಾಡುವುದನ್ನು ಸಹಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಆನ್‍ಲೈನ್ ಮೂಲಕ ಶಿಕ್ಷಣದ ಅವಶ್ಯಕತೆ ಇಲ್ಲದಿರುವ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲೆಗಳಿಗೂ ಸಹ ಆನ್‍ಲೈನ್ ಮೂಲಕ ಶಿಕ್ಷಣ ನೀಡುತ್ತೇವೆಂದು ಕೆಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಶೋಷಿಸುತ್ತಿರುವುದು ತಿಳಿದುಬಂದಿದೆ. 

ಆನ್‍ಲೈನ್ ತರಗತಿಗಳನ್ನು ನಡೆಸಬೇಕಾದಲ್ಲಿ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲದೇ ಮಕ್ಕಳ ಅನವಶ್ಯಕ ಶೋಷಣೆ ಶೋಷಣೆಗೆ ಮುಂದಾಗುವುದು ಸರಿಯಲ್ಲ. ತಾಂತ್ರಿಕ ಪರಿಕರಗಳನ್ನು ಉಪಯೋಗಿಸುವಾಗ ಉಂಟಾಗಬಹುದಾದ ಆರೋಗ್ಯದ ಅಡ್ಡಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಆನ್‍ಲೈನ್ ಶಿಕ್ಷಣವನ್ನು ನೀಡಬೇಕಾಗುತ್ತದೆ. 

ಅವೈಜ್ಞಾನಿಕವಾಗಿ ದಿನವಿಡೀ ಆನ್‍ಲೈನ್ ತರಗತಿಗಳನ್ನು ನಡೆಸುವಂತಹ ಅವೈಜ್ಞಾನಿಕ ಕ್ರಮಗಳಿಗೆ ಕಡಿವಾಣ ಹಾಕಲು ಕೂಡಲೇ ಕಟ್ಟನಿಟ್ಟಾದ ಸುತ್ತೋಲೆ ಹೊರಡಿಸಬೇಕೆಂದು ಸಚಿವರು ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!