ನಮ್ಮ ಊರು, ಸ್ವಚ್ಛ ಊರು ಚಿತ್ರಕಲಾ ಸ್ಪರ್ಧೆ

ಉಡುಪಿ : ಸ್ವಚ್ಛತೆಯ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಡೆಕಾರು ಚೈತನ್ಯ ಸೋಷಿಯಲ್ ವೆಲ್ಫೇರ್ ಫೌಂಡೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ “ನಮ್ಮ ಊರು ಸ್ವಚ್ಛ ಊರು” ವಿಷಯದಲ್ಲಿ ಚಿತ್ರಕಲಾ ಸ್ಪರ್ಧೆ ಕಡೆಕಾರು ಬಿಲ್ಲವ ಸೇವಾ ಸಂಘದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು ಅವರು ಮಾತನಾಡಿ ಸ್ವಚ್ಛತೆ ಮತ್ತು ತ್ಯಾಜ್ಯ ವಿಲೇವಾರಿಯ ಅಗತ್ಯತೆ ಬಗ್ಗೆ ತಿಳಿಸಿದರು. ಚಿತ್ರಕಲಾ ಸ್ಪರ್ಧೆಯ ಮೂಲಕ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಕೆಲಸ ಶಾಘ್ಲನೀಯ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಇಂತಹ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಸುಮಾರು ನೂರಕ್ಕೂ ಅಧಿಕ ಸ್ಪರ್ಧಾಳುಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು ಮುಖ್ಯ ಅತಿಥಿಯಾಗಿ ಕಡೆಕಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಘುನಾಥ್ ಕೋಟ್ಯಾನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ವಾಮನ ಬಂಗೇರ, ಕಡೆಕಾರು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ರಮೇಶ್ ಪೂಜಾರಿ, ಕುತ್ಪಾಡಿ ಕಡೆಕಾರು ಮೊಗವೀರ ಗ್ರಾಮಸಭೆ ಅಧ್ಯಕ್ಷ ಜಗನಾಥ್ ಕಡೆಕಾರ್, ಕರಾವಳಿ ಸ್ಪೋರ್ಟ್ಸ್ ನ ಅಧ್ಯಕ್ಷ ದಿನೇಶ್ ಜೆ, ನಿಡಂಬೂರು ಯುವಕ ಮಂಡಲದ ಅಧ್ಯಕ್ಷ ದಿನೇಶ್ ಅಮೀನ್, ನಿಡಂಬೂರು ನವೋದಯ ಸ್ವಸಹಾಯ  ಅಧ್ಯಕ್ಷ ಜಯಶೀಲ ಸುವರ್ಣ, ಲಯನ್ಸ್ ಕ್ಲಬ್ ಉದ್ಯಾವರ ಸನ್ಶೈನ್ ಅಧ್ಯಕ್ಷ ಲಯನ್ ಹೆನ್ರಿ ಡಿಸೋಜ, ಉಡುಪಿ ರಾಯಲ್ ಅಧ್ಯಕ್ಷ ದಯಾನಂದ ಎಸ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘಟಕ ಸುನೀಲ್ ಸಾಲ್ಯಾನ್ ಕಡೆಕಾರು ಪ್ರಸ್ತಾವನೆಗೈದು, ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿ ಸ್ವಾಗತಿಸಿದರು. ಗ್ರಾಮ ಪಂಚಾಯತ್ ಸದಸ್ಯ ಜತಿನ್ ಕಡೆಕಾರ್ ವಂದಿಸಿದರೆ, ರಿತೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!