ಪರ್ಯಾಯ: ಜ.15 ಮಲ್ಪೆಯಿಂದ ಪ್ರಥಮ ಹೊರೆಕಾಣಿಕೆ

ಉಡುಪಿ: ಅದಮಾರು ಮಠದ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಜನವರಿ 15 ಬುಧವಾರ ಪ್ರಥಮ ಹೊರೆಕಾಣಿಕೆ ಮಲ್ಪೆ ವಲಯದಿಂದ ಸಮರ್ಪಣೆಯಾಗಲಿದೆ. ಪರ್ಯಾಯ ಪೀಠವನ್ನೇರಲಿರುವ ಅದಮಾರು ಮಠದ ಪರಮ ಪೂಜ್ಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಮಧ್ಯಾಹ್ನ 3 ಗಂಟೆಗೆ ಮಲ್ಪೆ ಬಂದರಿನಲ್ಲಿ ಆಶೀರ್ವಚಿಸಿ ಹೊರೆ ಕಾಣಿಕೆಗೆ ಚಾಲನೆ ನೀಡಲಿದ್ದು, ಸಂಜೆ 4 ಗಂಟೆಗೆ ಜೋಡುಕಟ್ಟೆಯಿಂದ ಮೆರವಣಿಗೆ ಮೂಲಕ ಸಾಗಿ ಹೊರೆಕಾಣಿಕೆ ಸಮರ್ಪಣೆಗೊಳ್ಳಲಿದೆ.


ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಮಲ್ಪೆ ಬಂದರಿನ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ10 ಟನ್ ಅಕ್ಕಿ, 3 ಟನ್ ಬೆಲ್ಲ,10 ಸಾವಿರ ತೆಂಗಿನಕಾಯಿ, 1000 ಲೀಟರ್ ತೆಂಗಿನ ಎಣ್ಣೆ ಹಾಗೂ ಮಲ್ಪೆ ವಲಯದ ವಿವಿಧ ಭಜನಾ ಮಂದಿರ, ಸಂಘ ಸಂಸ್ಥೆಗಳ ವತಿಯಿಂದಲೂ ಹೊರೆಕಾಣಿಕೆ ಸಮರ್ಪಣೆಗೊಳ್ಳಲಿದೆ.
ಮಲ್ಪೆ ವಲಯದ ಹೊರೆ ಕಾಣಿಕೆ ಸಮರ್ಪಣೆಯಲ್ಲಿ ನಾಡೋಜ ಡಾ| ಜಿ. ಶಂಕರ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಕೃಷ್ಣ ಎಸ್. ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಕೋಟ್ಯಾನ್, ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷರಾದ ವಿನಯ ಕರ್ಕೇರ, ಮತ್ಸೋದ್ಯಮಿಗಳಾದ ಆನಂದ ಸಿ. ಕುಂದರ್, ಆನಂದ ಪಿ. ಸುವರ್ಣ, ಹರಿಯಪ್ಪ ಕೋಟ್ಯಾನ್, ಸಾಧು ಸಾಲ್ಯಾನ್, ರಮೇಶ್ ಕೋಟ್ಯಾನ್, ಮಲ್ಪೆ ಮೀನುಗಾರರ ಸಂಘದ ಮಾಜಿ ಆಧ್ಯಕ್ಷರಾದ ಸತೀಶ್ ಕುಂದರ್, ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷರಾದ ಮಂಜು ಕೊಳ, ಮಲ್ಪೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಜತ್ತನ್, ತಾಲೂಕು ಪಂಚಾಯತ್ ಸದಸ್ಯರಾದ ಶರತ್ ಕೋಟ್ಯಾನ್, ಹಸಿ ಮೀನು ಮಾರಾಟಗಾರರ ಸಂಘದ ಅಧ್ಯಕ್ಷರಾದ ಬೇಬಿ ಎಚ್. ಸಾಲ್ಯಾನ್, ಮಹಿಳಾ ಮೀನುಗಾರರ ಸಂಘದ ಅಧ್ಯಕ್ಷರಾದ ಜಲಜ ಕೋಟ್ಯಾನ್ ಹಾಗೂ ಮೀನುಗಾರ ಮುಖಂಡರು ಭಾಗವಹಿಸಲಿರುವುದಾಗಿ ಹೊರೆಕಾಣಿಕೆ ಉಸ್ತುವಾರಿಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‌ಪಾಲ್ ಎ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!