ಪರ್ಯಾಯೋತ್ಸವ: ಬಿಗಿ ಪೊಲೀಸ್ ಬಂದೋಬಸ್ತ್

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರ ಪರ್ಯಾಯ ಉತ್ಸವಕ್ಕೆ ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಭಾಗವಹಿಸಲಿದ್ದು, ಕಾರ್ಯಕ್ರಮಕ್ಕೆ ಕೇಂದ್ರ ಮಂತ್ರಿಗಳ ಜಿಲ್ಲಾ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲೆಯ ಸೂಕ್ಷ್ಮತೆಯನ್ನು ಕಂಡು ಮುಂಜಾಗ್ರತೆಗಾಗಿ ಬಂದೋಬಸ್ತ್ ಕರ್ತವ್ಯಕ್ಕೆ 1-ಎಸ್ಪಿ, 1-ಅಡಿಷನಲ್ ಎಸ್ಪಿ, 8-ಡಿವೈಎಸ್ಪಿ, 23-ಪೊಲೀಸ್ ನಿರೀಕ್ಷಕರು, 65-ಪಿಎಸ್ಐ, 193-ಎಎಸ್ಐ, 289-ಹೆಚ್.ಸಿ ಹಾಗೂ 530 ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು ಒಟ್ಟು 1110 ಅಧಿಕಾರಿ/ಸಿಬ್ಬಂದಿಯವರುಗಳನ್ನು ಹಾಗೂ 300 ಗೃಹರಕ್ಷಕ ಸಿಬ್ಬಂದಿಯವರನ್ನೂ ಸಹ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲಾಗಿದೆ. 

ಅಲ್ಲದೇ 04 ಕೆಎಸ್ಆರ್‌ಪಿ, 10 ಡಿಎಆರ್, 05 ವಿದ್ವಂಸಕ ಕೃತ್ಯ ಪತ್ತೆ ತಂಡವನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಶ್ರೀ ಕೃಷ್ಣ ಮಠದ ಸುತ್ತಮುತ್ತ ಕಣ್ಗಾವಲಿಗೆ ಸಿಸಿ ಕ್ಯಾಮರಗಳನ್ನು ಅಳವಡಿಸಲಾಗಿದೆ. ಸಾರ್ವಜನಿಕರ ಮಾಹಿತಿಗಾಗಿ ಕೃಷ್ಣಮಠದ ವಠಾರ ಮತ್ತು ಸರ್ವೀಸ್ ಬಸ್ ನಿಲ್ದಾಣದ ಬಳಿ ಹೊರಠಾಣೆಗಳನ್ನು ತೆರಯಲಾಗಿದೆ. ಒಟ್ಟು ನಗರದ 04 ಆಯಕಟ್ಟಿನ ಸ್ಥಳಗಳಲ್ಲಿ (ಅಂಬಾಗಿಲು, ಇಂದ್ರಾಳಿ, ಕುಕ್ಕಿಕಟ್ಟೆ. ಬಲಾಯಿಪಾದೆ ಕ್ರಾಸ್) ಚೆಕ್‌ಪೋಸ್ಟ್‌ಗಳನ್ನು ತೆರೆದು ದಿನದ 24 ಗಂಟೆಯೂ ಸೂಕ್ತ ಕಣ್ಗಾವಲು ವ್ಯವಸ್ಥೆ ಮಾಡಲಾಗಿದೆ. ಡ್ರೋನ್‌ಗಳ ಹಾರಾಟವನ್ನು ನಿಷೇಧಿಸಲಾಗಿದೆ.

ಡ್ರೋನ್‌ಗಳ ಹಾರಾಟವನ್ನು ನಿಷೇಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!