ಆರೋಗ್ಯಯುತ ಸಮಾಜಕ್ಕೆ ಜನಸಂಖ್ಯಾ ನಿಯಂತ್ರಣ ಅಗತ್ಯ : ಸಿವಿಲ್ ನ್ಯಾಯಾಧೀಶೆ ನೂರುನ್ನೀಸ

ಮಡಿಕೇರಿ : ಪ್ರತಿಯೊಬ್ಬರ ಜೀವನ ಮಟ್ಟ ಸುಧಾರಿಸುವಂತಾಗಲು ಮತ್ತು ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಜನಸಂಖ್ಯಾ ಸ್ಪೋಟ ತಡೆಯುವುದು ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸ ಅವರು ಹೇಳಿದ್ದಾರೆ.

ವಿಶ್ವ ಜನಸಂಖ್ಯಾ ದಿನಚಾರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು, ಪ್ರತಿಯೊಬ್ಬರಿಗೂ ಶಿಕ್ಷಣ ಆರೋಗ್ಯ, ಆಹಾರ, ವಸತಿ, ಉದ್ಯೋಗ ಮತ್ತಿತರ ಮೂಲ ಸೌಲಭ್ಯ ದೊರೆಯುವಂತಾಗಲೂ ಜನಸಂಖ್ಯೆ ನಿಯಂತ್ರಣ ಅಗತ್ಯ ಎಂದರು. ಜನಸಂಖ್ಯೆ ನಿಯಂತ್ರಿಸಿ ರಾಷ್ಟ್ರದ ಅಭಿವೃದ್ದಿಗೆ ಪ್ರತಿಯೋಬ್ಬರೂ ಕೈಜೋಡಿಸುವಂತಾಗಬೇಕು ಎಂದು ಹಿರಿಯ ನ್ಯಾಯಾಧಿಶರು ಸಲಹೆ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಬೋಧಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಆಸ್ಪತ್ರೆ, ಜಿಲ್ಲಾ ಕಾನೂನು ಮತ್ತು ಸೇವಾ ಪ್ರಾಧಿಕಾರ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ, ಸ್ವಯಂ ಸೇವಾ ಸಂಸ್ಥೆಗಳು, ರೋಟರಿ ಕ್ಲಬ್ ಮತ್ತು ನೆಹರು ಯುವಕ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾ ಕೇತ್ರದಲ್ಲಿ ನಡೆದ ಕಾರ್‍ಯಕ್ರಮ.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆನಂದ್ ಅವರು ಮಾತನಾಡಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು 1989 ಜುಲೈ 11 ರಂದು ವಿಶ್ವದ ಜನಸಂಖ್ಯೆ 500 ಕೋಟಿ ತಲುಪಿದ ಕಾರಣ ಜನಸಂಖ್ಯಾ ಸ್ಪೋಟದಿಂದ ಅಗುವ ಆರ್ಥಿಕ, ಸಾಮಾಜಿಕ ದುಷ್ಪರಿಣಾಮಗಳ ಕುರಿತಾಗಿ ಯುವಜನರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ  ಪ್ರತೀ ವರ್ಷ ಜುಲೈ 11 ರಂದು ಜನಸಂಖ್ಯೆ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

Leave a Reply

Your email address will not be published. Required fields are marked *

error: Content is protected !!