ಮಹಿಳಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿರುವ ಪೋಸ್ಟ್‌ಕಾರ್ಡ್ ಚಳುವಳಿ

 “ಇ.ವಿ.ಎಮ್ ತೊಲಗಿಸಿ, ಮತಪತ್ರ ಬಳಸಿ, ಪ್ರಜಾ ಪ್ರಭುತ್ವ ಉಳಿಸಿ” ಎಂದು ಬರೆದು ಸನ್ಮಾನ್ಯ ರಾಷ್ಟ್ರಪತಿಗಳಿಗೆ ಕಳುಹಿಸುವ ಪೋಸ್ಟ್‌ಕಾರ್ಡ್ ಚಳುವಳಿಗೆ ಉಡುಪಿ ಜಿಲ್ಲೆಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯು ರಾಜ್ಯಾದಾದ್ಯಂತ ಹಮ್ಮಿಕೊಂಡಿರುವ ಪೋಸ್ಟ್‌ಕಾರ್ಡ್ ಚಳುವಳಿ.

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಳೆಯವರು ಉಡುಪಿಯ ಪ್ರಧಾನ ಅಂಚೆ ಕಚೇರಿಯ ಆವರಣದಲ್ಲಿ ಅಂಚೆ ಕಾರ್ಡ್‌ನಲ್ಲಿ ಚಳುವಳಿಯ ಧ್ಯೇಯವಾಕ್ಯಗಳನ್ನು ಬರೆದು ಅಂಚೆಪೆಟ್ಟಿಗೆಗೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಜ್ಯೋತಿ ಹೆಬ್ಬಾರ್,ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಚಂದ್ರಿಕಾ ಶೆಟ್ಟಿ, ಕಾಪು ಬ್ಲಾಕ್ ಅಧ್ಯಕ್ಷೆ ಪ್ರಭಾ ಶೆಟ್ಟಿ, ಜಯಶ್ರೀ ಶೇಟ್ ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!