ಪ್ರಕೃತಿ ಪ.ಪೂ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ

ಕಾರ್ಕಳ:  ಪ್ರಕೃತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹೊಸದಾಗಿ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಫ್ರೆಶರ್‍ಸ್ ಡೇ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.

ಗುಲಾಬಿ ಹೂ ನೀಡಿ, ಹಾಡಿನೊಂದಿಗೆ ಹಿರಿಯ ವಿದ್ಯಾರ್ಥಿಗಳು ಕಿರಿಯರನ್ನು ಸ್ವಾಗತಿಸಿ ಹಣತೆಗಳನ್ನು ಬೆಳಗಿಸಿ ಸುಜ್ಞಾನದ ಬೆಳಕನ್ನು ಸಾಂಕೇತಿಕವಾಗಿ ತೋರಿದರು. ಸಂಸ್ಥೆಯ ಪ್ರಾಂಶುಪಾಲ ಪ್ರೊ. ಬಿ. ಪದ್ಮನಾಭ ಗೌಡ, ಕಾರ್ಯಕಾರಿ ಪ್ರಾಂಶುಪಾಲೆ ಶ್ರೀಮತಿ ಜ್ಯೋತಿ ಮನೋಜ್, ಪ್ರಕೃತಿ ನ್ಯಾಷನಲ್ ಸ್ಕೂಲ್‌ನ ಪ್ರಾಂಶುಪಾಲ ಡಾ. ರಾಕಿ ಮಥಾಯಿ ಆಂಟನಿ ಹಾಗೂ ಉಪನ್ಯಾಸಕ ವೃಂದ ವಿದ್ಯಾರ್ಥಿಗಳೊಡನೆ ಪಾಲ್ಗೊಂಡು, ಸಂಸ್ಥೆಯ ನೀತಿ ನಿಯಾಮಾವಳಿಗಳನ್ನು ಅಳವಡಿಸಿಕೊಂಡು, ಶಿಸ್ತಿನಿಂದ ವರ್ತಿಸಿ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಉತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಸಂಸ್ಥೆಗೂ, ಹೆತ್ತವರಿಗೂ ಕೀರ್ತಿ ತರುವಂತಾಗಲಿ ಎಂದು ಹಾರೈಸಿದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯಾಗಿ ಒಂದೊಂದು ಗಿಡವನ್ನು ನೀಡಿದ್ದು ವಿಶೇಷವಾಗಿತ್ತು.

ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿ ಕಾರ್‍ಯಕ್ರಮಗಳು ನಡೆದವು.

Leave a Reply

Your email address will not be published. Required fields are marked *

error: Content is protected !!