ಕೊನೆಗೂ ಜೆಡಿಎಸ್ಗೆ ರಾಜೀನಾಮೆ ಕೊಟ್ಟ ಪ್ರಮೋದ್ ಮಧ್ವರಾಜ್
ಉಡುಪಿ: ಮಾಜಿ ಸಚಿವ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ನ ಮೈತ್ರಿ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ಇಂದು ಜೆಡಿಎಸ್ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಜ್ಯಧ್ಯಕ್ಷರಾದ ಎಚ್. ಕೆ. ಕುಮಾರಸ್ವಾಮಿಗೆ ಪತ್ರ ಬರೆದಿರುವ ಅವರು ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ತಾನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದೆ. ಈ ವಿಷಯವನ್ನು ಕಾಂಗ್ರೆಸ್ ಪಕ್ಷದ ವರಿಷ್ಟರಲ್ಲಿಯೂ ಚರ್ಚಿಸಿದ್ದೆ ಆ ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಟ್ಟಿದ್ದರಿಂದ ತಾನು ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಸ್ಪರ್ಧಿಸಬೇಕಾಯಿತು.
ಆ ಸಂದರ್ಭ ತಮ್ಮ ಪಕ್ಷ ನೀಡಿದ್ದ ಬಿ ಫಾರಂನಲ್ಲಿ ಪಕ್ಷದ ಸದಸ್ಯನೆಂದು ನಮೂದಿಸಲ್ಪಟ್ಟಿತ್ತು, ಕಾಂಗ್ರೆಸ್ ಹಾಗೂ ಜೆಡಿಎಸ್ ಪದಾಧಿಕಾರಿಗಳು ತನಗೆ ಲೋಕಸಭಾ ಚುನಾವಣೆಯ ಸಂದರ್ಭ ಸಂಪೂರ್ಣ ಬೆಂಬಲ ನೀಡಿದ್ದರು.
ಇದೀಗ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರ ಇಲ್ಲದಿರುವುದರಿಂದ ನಾನು ತಾಂತ್ರಿಕ ಕಾರಣಗಳಿಂದ ಹೊಂದಿದ್ದ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆಂದು ಪ್ರಮೋದ್ ಮಧ್ವರಾಜ್ ನೀಡಿದ ರಾಜೀನಾಮೆ ಪತ್ರದಲ್ಲಿದೆ.
Good move Mr. Madhwaraj… Good luck