ಕರಾವಳಿ ನಾಲ್ಕು ದಿನ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ

ಉಡುಪಿ: ಪಶ್ಚಿಮ ಶ್ರೀಲಂಕಾ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರಾವಳಿಯಲ್ಲಿ ನಾಲ್ಕು ದಿನ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ವಾಯಭಾರ ಕುಸಿತದಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು ಮೀನುಗಾರರು ಸಮುದ್ರಕ್ಕಿಳಿಯಬಾರದು. ಹಾಗೂ ಡಿ.4 ರವರೆಗೂ ಕರಾವಳಿ ಭಾಗಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರರು ಎಚ್ಚರದಿಂದ ಇರುವಂತೆ ಮುನ್ಸೂಚನೆ ನೀಡಲಾಗಿದೆ.

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವೆಡೆ ಭಾನುವಾರದಿಂದ ತುಂತುರ ಮಳೆ, ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಸೋಮವಾರ ಕೂಡ ಉಡುಪಿ ನಗರದ ಕೆಲವು ಭಾಗದಲ್ಲಿ ಸಾಧಾರಣಾ ಗುಡುಗು ಸಹಿತ ಮಳೆಯಾಗಿದೆ.

Leave a Reply

Your email address will not be published. Required fields are marked *

error: Content is protected !!