ಕರಾವಳಿಯಲ್ಲಿ ಮತ್ತೆ ಮಳೆ ಆಗುವ ಸೂಚನೆ – ಹವಾಮಾನ ಇಲಾಖೆಯಿಂದ ಎಚ್ಚರಿಕೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸೂಚನೆಯನ್ನು ರಾಜ್ಯ ಹವಮಾನ ಇಲಾಖೆ ನೀಡಿದೆ.ಕಳೆದ ಕೆಲವು ದಿನಗಳಿಂದ ಕ್ಯಾರೆ ಚಂಡಮಾರುತ ಅಪ್ಪಳಿಸಿದ ಕಾರಣ ತತ್ತರಿಸಿದ್ದ ಕರಾವಳಿಯಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಮಳೆಯಿಂದ ರಾಜ್ಯಕ್ಕೆ ಯಾವುದೇ ರೀತಿಯ ಹಾನಿ ಸಂಭವಿಸುವುದಿಲ್ಲ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಕನ್ಯಾಕುಮಾರಿಗೆ ಮಾರುತಗಳು ಆಗಮಿಸಿದ್ದು, ಮಳೆ ಸುರಿಯುತ್ತಿದೆ. ಮಳೆೆೆೆಯ ಮಾರುತಗಳು ಪ್ರಬಲವಾಗಿದ್ದರೆ ರಾಜ್ಯಕ್ಕೂ ವ್ಯಾಪಿಸಿ ಮಳೆ ಸುರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ