ಮಾಧ್ಯಮಗಳ ಚಿತ್ರೀಕರಣಕ್ಕೆ ನಿರ್ಬಂಧ: ಹೈಕೋರ್ಟ್ ಗೆ ಪಿಐಎಲ್

ಬೆಂಗಳೂರು: ವಿಧಾನಮಂಡಲ ಕಲಾಪಕ್ಕೆ ಖಾಸಗಿ ಮಾಧ್ಯಮಗಳ ಚಿತ್ರೀಕರಣ ನಿರ್ಬಂಧ ವಿರುದ್ಧ ಪ್ರತಿಪಕ್ಷ ಹಾಗೂ ಮಾಧ್ಯಮಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗಿತ್ತು. 

ಈ ಮಧ್ಯೆ ವಿದ್ಯುನ್ಮಾನ ಮಾಧ್ಯಮಗಳಿಗೆ ವಿಧಾನಮಂಡಲ ಕಲಾಪಗಳ ನೇರ ಪ್ರಸಾರದ ಅವಕಾಶ ನಿರಾಕರಿಸಿದ ಸ್ಪೀಕರ್ ಆದೇಶ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸೋಮವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ವಕೀಲರಾದ ಎಲ್. ರಮೇಶ್ ನಾಯಕ್ ಎಂಬವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಸ್ಪೀಕರ್ ಆದೇಶ ಸಂವಿಧಾನದ 19(1) (ಎ) ಹಾಗೂ 21ನೇ ಪರಿಚ್ಛೇದದ ಉಲ್ಲಂಘನೆಯಾಗಿದೆ. ಈ ಆದೇಶದಿಂದ ಮಾಧ್ಯಮಗಳಿಗೆ ನೇರವಾಗಿ ಹಾಗೂ ಪರೋಕ್ಷವಾಗಿ ದೊಡ್ಡ ಮಟ್ಟದ ಮತದಾರರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಚ್ಯುತಿ ಬಂದಂತಾಗಿದೆ ಎಂದು ಆಕ್ಷೇಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!