ಪೆಟ್ರೋಲ್-ಡೀಸೆಲ್ ದರದಲ್ಲಿ ತಲಾ 1 ರೂ. ಏರಿಕೆ ಸಾಧ್ಯತೆ
ನವದೆಹಲಿ: ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ. 1 ರಷ್ಟು ಹೆಚ್ಚಾಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆಯಿಂದಾಗಿ ಸಾಮಾನ್ಯ ವರ್ಗದವರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ಗೆ ತಲಾ ರೂ. 1 ರಷ್ಟು ಅಬಕಾರಿ ಸುಂಕ ಮತ್ತು ರಸ್ತೆ-ಮೂಲಸೌಕರ್ಯ ಸೆಸ್ನ್ನು ಹೆಚ್ಚಿಸಬೇಕಾಗಿರುವುದರಿಂದ ಇಂಧನ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಪೆಟ್ರೋಲ್ ಬೆಲೆ 70ರ ಗಡಿ ದಾಟಿದ್ದು, ಮುಂಬೈಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 76.15 ಇದೆ. ಡೀಸೆಲ್ ದರ ಲೀಟರ್ ಗೆ 67.20ರೂ. ಇದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದು, ಆ ಸಂದರ್ಭದಲ್ಲಿ ಅಬಕಾರಿ ಸುಂಕ ಹೆಚ್ಚಿಸುವ ಬಗ್ಗೆ ಪ್ರಸ್ತಾವ ಮುಂದಿಟ್ಟರು.