ಉಡುಪಿ ಇ ಸ್ಯಾಂಡ್ ಆಪ್ ಮೂಲಕ ಮರಳು ವಿತರಣೆ – ಜಿಲ್ಲಾಧಿಕಾರಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ನವೆಂಬರ್ 23 ರಿಂದ ಉಡುಪಿ ಇ-ಸ್ಯಾಂಡ್ ಆಪ್ ಮೂಲಕ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ /ಅಭಿವೃದ್ದಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಳ್ಳಲಿದ್ದು, ಮರಳು ಅವಶ್ಯಕತೆ ಇರುವವರು ಆನ್ ಲೈನ್ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ನವೆಂಬರ್ 23 ರಂದು ಬೆಳಗ್ಗೆ 10 ಗಂಟೆಗೆ ಇ-ಸ್ಯಾಂಡ್ ಆಪ್ ಮೂಲಕ ಮರಳು ವಿತರಣೆ ಆರಂಭವಾಗಲಿದ್ದು, ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಹೊರಗೆ ಮರಳು ಪೂರೈಸಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಬಜೆ ಡ್ಯಾಂ ನಿಂದ ಹೂಳೆತ್ತುವ ಕಾರ್ಯವು ಪ್ರಗತಿಯಲ್ಲಿದ್ದು, ಸದರಿ ಹೂಳಿನಲ್ಲಿ ದೊರಕುವ ಮರಳನ್ನು ಸಾರ್ವಜನಿಕರಿಗೆ /ಅಭಿವೃದ್ದಿ ಕಾಮಗಾರಿಗಳಿಗೆ ಉಡುಪಿ ಇ-ಸ್ಯಾಂಡ್ ಆಪ್ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದ್ದು, ಸದರಿ ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನಗಳನ್ನು ಉಡುಪಿ ಇ-ಸ್ಯಾಂಡ್ ಆಪ್ ನಲ್ಲಿ ನೊಂದಾಯಿಸಿಕೊಳ್ಳಲು ಈಗಾಗಲೇ ತಿಳಿಸಲಾಗಿದೆ.
ಹಚ್ಚಿನ ಮಾಹಿತಿಗಾಗಿ, ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಉಡುಪಿ ಜಿಲ್ಲೆ, ಉಡುಪಿ ದೂ.ಸಂ. 0820-2572333 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!