ಸೆಲ್ಕೋ ‘ಸೌರಹೊಳಪು’ ಪ್ರದರ್ಶನ: ಸಚಿವ ಈಶ್ವರಪ್ಪ ಚಾಲನೆ


ಕೋಟ: ವಿವೇಕ ಹೈಸ್ಕೂಲ್ ಆವರಣದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್, ಡಾ| ಶಿವರಾಮ ಕಾರಂತ ಪ್ರತಿಷ್ಠಾನ(ರಿ) ಕೋಟ ಇವರು ಡಾ| ಶಿವರಾಮ ಕಾರಂತರವರ ಜನ್ಮ ದಿನೋತ್ಸವದ ಅಂಗವಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್‌ರಾಜ್ ಹಾಗೂ ನಗರ ಸ್ಥಳೀಯಾಡಳಿತ ಪ್ರತಿನಿಧಿಗಳಿಗಾಗಿ ಆಯೋಜಿಸಲಾಗಿದ್ದ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ‘ಹೊಳಪು’ ಕಾರ್ಯಕ್ರಮದಲ್ಲಿ ವಿಶೇಷವಾಗಿ ಸೆಲ್ಕೋ ಸಂಸ್ಥೆಗೆ ಮಾತ್ರ ನೀಡಲಾದ ‘ಸೌರ ಹೊಳಪು’ ಎಂಬ ಜೀವನಾಧಾರ ಉತ್ಪನ್ನಗಳ ಪ್ರದರ್ಶನವನ್ನು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪರವರು ಚಾಲನೆ ನೀಡಿದರು.


ಇದೇ ಸಂದರ್ಭದಲ್ಲಿ ಸೋಲಾರ್ ಆಧಾರಿತ ಕುಂಬಾರಿಕೆ ಯಂತ್ರ, ಕಮ್ಮಾರರ ಡಿ.ಸಿ. ಬ್ಲೋವರ್, ಟೈಲರ್‌ಗಳಿಗೆ ಹೊಲಿಗೆ ಯಂತ್ರ, ಹೈನುಗಾರರಿಗೆ ಹಾಲು ಕರೆಯುವ ಯಂತ್ರ ಇತ್ಯಾದಿ ಯಂತ್ರಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಇವರು ಇಂಥಹ ಸಂಶೋಧನೆಗಳಿಗೆ ತಮ್ಮ ಸಹಕಾರವನ್ನು ನೀಡುವ ಬಗ್ಗೆ ತಮ್ಮ ಆಶ್ವಾಸನೆಯನ್ನು ನೀಡಿದರು.
‘ಹೊಳಪು’ ಕಾರ್ಯಕ್ರಮದ ರೂವಾರಿ, ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು, ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು, ಸೆಲ್ಕೋ ಸಂಸ್ಥೆಯ ಸಹಾಯಕ ಮಹಾ ಪ್ರಬಂಧಕರಾದ ಗುರುಪ್ರಕಾಶ್ ಶೆಟ್ಟಿ ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಾಜಿ ಸಜಿವರಾದ ಜಯಪ್ರಕಾಶ್ ಹೆಗ್ಡೆ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾ.ಗಣೇಶ್ ಕಾರ್ಣಿಕ್, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಇವರುಗಳು ಭೇಟಿ ನೀಡಿ, ಈ ವಿಶೇಷ ಜೀವನಾಧಾರಿತ ಉತ್ತನ್ನಗಳಿಗೆ ಮೆಚ್ಚುಗೆ ಸೂಚಿಸಿದರು.

Leave a Reply

Your email address will not be published. Required fields are marked *

error: Content is protected !!