ಹಿರಿಯ ರಂಗಕರ್ಮಿ ಡಿ.ಕೆ.ಚೌಟ ವಿಧಿವಶ

ಬೆಂಗಳೂರು: ಹಿರಿಯ ರಂಗಕರ್ಮಿ, “ರಂಗ ನಿರಂತರ”ದ ಕಾರ್ಯಾಧ್ಯಕ್ಷರಾಗಿದ್ದ ಡಿ.ಕೆ.ಚೌಟ (82) ಇಂದು ಮಧ್ಯಾಹ್ನ ನಗರದ ಜಯದೇವ ಆಸ್ಪತ್ರೆಯಲ್ಲಿ ನಿಧನರಾದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, 15 ದಿನಗಳ ಹಿಂದೆ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

ಇಂದು ಮುಂಜಾನೆ ಎದೆನೋವು ಕಾಣಿಸಿಕೊಂಡ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬಸವೇಶ್ವರ ನಗರ ಪೊಲೀಸ್ ಠಾಣೆ ಹಿಂಭಾಗದಲ್ಲಿರುವ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶವಿದೆ. ನಾಳೆ ಮುಂಜಾನೆ ೭ಕ್ಕೆ ಹರಿಶ್ಚಂದ್ರಘಾಟ್‌ನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಡಿ.ಕೆ. ಚೌಟ ಎಂದೇ ಜನಪ್ರಿಯರಾಗಿದ್ದ ದರ್ಬೆ ಕೃಷ್ಣಾನಂದ ಚೌಟ ಹುಟ್ಟಿದ್ದು ಜೂನ್ 1, 1938ರಂದು. ಕಾಸರಗೋಡು ಜಿಲ್ಲೆಯ ಮೀಯಪದವಿನ ದರ್ಬೆ ಮನೆತನದ ಚೌಟ ಅವರ ಊರು ಮಂಜೇಶ್ವರದಿಂದ ಏಳು ಕಿ.ಮೀ ದೂರದಲ್ಲಿದೆ. ಚಿತ್ರಕಲೆ ಮತ್ತು ರಂಗಭೂಮಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದು, ಕಲಾ ಪೋಷಕರೂ ಆಗಿದ್ದರು. ಕಳೆದ ವರ್ಷ ನಡೆದ ಸಿಜಿಕೆ ರಾಷ್ಟ್ರೀಯ ರಂಗೋತ್ಸವದ ಅಧ್ಯಕ್ಷರಾಗಿದ್ದರು.

ಮಕ್ಕಳಾದ ಪ್ರಜ್ಞಾ ಚೌಟ, ಮತ್ತು ಬಾಲಿವುಡ್ ಸಂಗೀತ ನಿರ್ದೇಶಕ ಸಂದೀಪ್ ಚೌಟ ಸೇರಿದಂತೆ ಅಪಾರ ಬಂಧುಗಳು, ಅಭಿಮಾನಿಗಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!