ಸ್ಟೂಡೆಂಟ್ ವೆಲ್ಫೇರ್ ಕೌನ್ಸಿಲ್ನ ಅಧ್ಯಕ್ಷರಾಗಿ ಶೆರ್ವಿನ್ ಒಲಿವೆರಾ ಕೆಮ್ಮಣ್ಣು ಆಯ್ಕೆ

ಉಡುಪಿ ಜಿಲ್ಲೆಯ ಪ್ರಸಿದ್ಧ ಕಾಲೇಜುಗಳಲ್ಲಿ ಒಂದಾಗಿರುವ ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ ಇದರ ಸ್ಟೂಡೆಂಟ್ ವೆಲ್ಫೇರ್ ಕೌನ್ಸಿಲ್ನ ಅಧ್ಯಕ್ಷರಾಗಿ ಶೆರ್ವಿನ್ ಒಲಿವೆರಾ ಕೆಮ್ಮಣ್ಣು ಆಯ್ಕೆಯಾಗಿದ್ದಾರೆ.

ತೃತೀಯ ವರ್ಷದ ಬಿಕಾಂ ವಿದ್ಯಾರ್ಥಿಯಾಗಿರುವ ಶೆರ್ವಿನ್ ಒಲಿವೇರ, ತನ್ನ ಚುರುಕುತನದಿಂದ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದು, ಕಲೆ, ಸಾಹಿತ್ಯ, ಕ್ರೀಡೆಯಲ್ಲಿ ಮುಂಚೂಣಿಯಲ್ಲಿದ್ದಾರೆ.

ಪ್ರಸ್ತುತ ಶರ್ವಿನ್ ಒಲಿವೇರ ತನ್ನ ವಿದ್ಯಾಭ್ಯಾಸದೊಂದಿಗೆ ಭಾರತೀಯ ಕೆಥೋಲಿಕ್ ಯುವ ಸಂಚಲನ (ಐಸಿವೈಎಂ) ಕೆಮ್ಮಣ್ಣು ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!