ಜಿಲ್ಲೆಯ ಅಭಿವೃದ್ಧಿ ಕುರಿತು ಮುಖ್ಯಮಂತ್ರಿ,ಅಧಿಕಾರಿಗಳ ಚರ್ಚೆ:ಕರಂದ್ಲಾಜೆ
ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಕಚೇರಿ ಕೃಷ್ಣಾದಲ್ಲಿ ಇಂದು ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳಾದ ನೆರೆ ಪರಿಹಾರ, ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ, ESI ಕಾಯ್ದೆಯಡಿ ನೊಂದಣಿ, ಕಿರು ವಿಮಾನ ನಿಲ್ದಾಣ ಕಾಮಗಾರಿ, ಜಲಧಾರೆ ಯೋಜನೆ ಹಾಗೂ ಇತರ ವಿಷಯಗಳನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಶೋಭಾ ಕರಂದ್ಲಾಜೆ, ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು.