ಶಾಕಿಂಗ್ ನ್ಯೂಸ್: ಪೆಟ್ರೋಲ್ 10 ರೂ, ಡೀಸೆಲ್ 13 ರೂ. ಏರಿಕೆ ಸಾಧ್ಯತೆ?
ನವದೆಹಲಿ: ಲಾಕ್‍ಡೌನ್ ಬಿಗ್ ರಿಲೀಫ್ ಸಿಕ್ಕಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ಹೆಚ್ಚಳ ಮಾಡಿ ಆರ್ಥಿಕತೆಗೆ ಸರಿತೂಗಿಸಲು ಗಂಭೀರ ಚಿಂತನೆ ನಡೆಸಿದೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಒಂದು ಲೀಟರ್ ಪೆಟ್ರೋಲ್ ಮೇಲೆ 8 ರೂ. ರಸ್ತೆ ಮತ್ತು ಮೂಲಸೌಕರ್ಯ ಸೆಸ್, 2 ರೂ. ವಿಶೇಷ ಅಬಕಾರಿ ಸುಂಕ ಹೇರಿದ ಪರಿಣಾಮ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 10 ರೂ., ಪ್ರತಿ ಲೀಟರ್ ಡೀಸೆಲ್ ಮೆಲೆ 8 ರೂ. ರಸ್ತೆ ಮತ್ತು ಮೂಲಸೌಕರ್ಯ ಸೆಸ್ ಹೇರಿದರೆ, 5 ರೂ. ವಿಶೇಷ ಅಬಕಾರಿ ಸುಂಕ ಹೇರಿದ ಪರಿಣಾಮ ಪ್ರತಿ ಲೀಟರ್ ಡೀಸೆಲ್ ಬೆಲೆ 13 ರೂ. ಏರಿಕೆಯಾಗುವ ಸಾಧ್ಯತೆ ಇದೆ.
. ಸರಕು ಮತ್ತು ಸೇವಾ ತೆರಿಗೆ ಜಾರಿಯಾಗಿದ್ದರೂ ರಾಜ್ಯಗಳಿಗೆ ಹೆಚ್ಚಿನ ಆದಾಯ ತಂದುಕೊಡುವ ಪೆಟ್ರೋಲ್, ಡೀಸೆಲ್, ಮದ್ಯವನ್ನು ಪಟ್ಟಿಯಲ್ಲಿ ಕೈ ಬಿಡಲಾಗಿತ್ತು. ಪರಿಣಾಮ ಈ ವಸ್ತುಗಳ ಮೇಲೆ ರಾಜ್ಯಗಳಿಗೆ ತೆರಿಗೆ ವಿಧಿಸುವ ಅಧಿಕಾರವಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಇಳಿಕೆಯಾಗಿದೆ. ಹೀಗಾಗಿ ಭಾರತದಲ್ಲೂ ತೈಲ ಬೆಲೆ ಇಳಿಕೆಯಾಗಬೇಕಿತ್ತು. ಆದರೆ ರಾಜ್ಯ ಸರ್ಕಾರಗಳು ಲಾಕ್‍ಡೌನ್ ನಿಂದ ಆಗಿರುವ ನಷ್ಟವನ್ನು ಸರಿಪಡಿಸಲು ಪೆಟ್ರೋಲ್, ಡೀಸೆಲ್, ಮದ್ಯದ ಮೇಲೆ ತೆರಿಗೆ ವಿಧಿಸುತ್ತಿವೆ.