ಯುವತಿಯ ಅತ್ಯಾಚಾರ ವಿಡಿಯೋ ಚಿತ್ರೀಕರಣ: ಇಸ್ಲಾಂಗೆ ಮತಾಂತರಕ್ಕೆ ಒತ್ತಡ
ಉಡುಪಿ: ರಾಜ್ಯದಲ್ಲಿ ಲವ್ ಜಿಹಾದ್ ನಿರಂತರವಾಗಿದ್ದು ಕಾಸರಗೋಡುವಿನ ಯುವತಿಯೊಬ್ಬಳನ್ನು ಅತ್ಯಾಚಾರ ಎಸಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಒತ್ತಡ ಹೇರಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದದ್ಲಾಜೆ ಮಾಡಿದ್ದಾರೆ.
ಕಾಸರಗೋಡು ತಾಲೂಕಿನ ಮೊಗ್ರಾಲ್ ಪುತ್ತೂರ್ ಯುವತಿಯನ್ನು ಪುಸಲಾಯಿಸಿ ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿ, ಅದರ ವಿಡಿಯೋ ಚಿತ್ರೀಕರಣ ಮಾಡಿ ಯುವತಿಯನ್ನು ಮತ್ತು ಅವರ ಮನೆಯವರ್‍ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಒತ್ತಾಯಿಸಲಾಗುತ್ತಿದೆ. ಇದಕ್ಕೆ ಒಪ್ಪದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ ಒಡ್ಡಿದ್ದಾಗಿ ಸಂಸದೆ ಶೋಭಾ ಆರೋಪಿಸಿದ್ದಾರೆ.
ಭಾನುವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಸಂತ್ರಸ್ತೆ ಯುವತಿಯ ಜೊತೆಗೆ ಭೇಟಿಯಾದ ಶೋಭಾ ಕರಂದ್ಲಾಜೆ ಘಟನೆಯ ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ. ಅಲ್ಲದೆ, ಪ್ರಕರಣದ ಕುರಿತಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ದೂರು ನೀಡಿದ್ದಾರೆ.