ವೈರಸ್ ಹರಡುವವರನ್ನು ಗುಂಡಿಕ್ಕಿ ಕೊಂದರೂ ತಪ್ಪಿಲ್ಲ: ರೇಣುಕಾಚಾರ್ಯ

ದಾವಣಗೆರೆ: ವೈರಸ್ ಹರಡುತ್ತಿರುವುದು ಒಂದು ಭಯೋತ್ಪಾದನೆ ಇದ್ದಂತೆ.. ಅವರೆಲ್ಲ ದೇಶದ್ರೊಹಿಗಳು.  ತಬ್ಲೀಗ್‌ಗೆ ಹೋದವರು ನೇರವಾಗಿ ಆಸ್ಪತ್ರೆಗೆ ಬಂದಿದ್ದರೆ ಈ ರೀತಿ ಆಗುತ್ತಿರಲಿಲ್ಲ. ತಬ್ಲೀಗ್‌ಗೆ ಹೋಗಿ ಬಂದವರಲ್ಲಿ ಯಾರು ಚಿಕಿತ್ಸೆಗೆ ಸ್ಪಂದಿಸುವುದಿಲ್ಲವೋ ಅವರಿಗೆ ಗುಂಡಿಟ್ಟು ಕೊಂದರೂ ತಪ್ಪಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಎಲ್ಲಾ ಅಲ್ಪಸಂಖ್ಯಾತರ ಬಗ್ಗೆ ಹೇಳುತ್ತಿಲ್ಲ, ತಬ್ಲಿಗ್‌ಗೆ ಹೋಗಿ ಬಂದು ಸ್ಪಂದನೆ ನೀಡದವರಿಗೆ ಮಾತ್ರ ಎಂದು ಸ್ಪಷ್ಟಪಡಿಸಿದರು.

ಚೀನಾದಲ್ಲಿ ಒಬ್ಬನಿಂದ ಇಡೀ ವಿಶ್ವಕ್ಕೆ ಕೊರೋನಾ ಬಂದಿದೆ. ಹಾಗೇ ಯಾರು ಹೋಗಿದ್ದಾರೋ ಅವರು ಚಿಕಿತ್ಸೆ ಪಡೆಯಲು ಮುಂದೆ ಬರಲಿ ಎಂದು ಸಲಹೆ ನೀಡಿದರು.

Leave a Reply

Your email address will not be published. Required fields are marked *

error: Content is protected !!