ದ.ಕ. ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ರೂಪೇಶ್ ಐಎಎಸ್

ಉಡುಪಿ ಜಿಲ್ಲಾ ಪಂಚಾಯತ್ ಸಿ ಇ ಒ ಆಗಿದ್ದ ಸಿಂಧು ರೂಪೇಶ್  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ .

2011ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 17ನೇ ರ್ಯಾಂಕ್ ಪಡೆದಿದ್ದ ಸಿಂಧು, ರಾಜ್ಯದ ಅಭ್ಯರ್ಥಿಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಮೈಸೂರು ಮೂಲದ ಸಿಂಧು, ಮೈಸೂರಿನ ಎನ್ಐಇಯಿಂದ ಬಿ.ಇ . ಪದವಿ ಪಡೆದ ಬಳಿಕ ಎರಡು ವರ್ಷ ಬೆಂಗಳೂರಿನ ಸಾಫ್ಟ್ವೇರ್ ಕಂಪೆನಿಯೊಂದರಲ್ಲಿ ದುಡಿದು, ಕೆಲಸಕ್ಕೆ ರಾಜಿನಾಮೆ ನೀಡಿ ಒಂದೇ ವರ್ಷದ ತಯಾರಿಯಲ್ಲಿ ಯುಪಿಎಸ್ಸಿ ಪರೀಕ್ಷೆಯನ್ನು 17ನೇ ರ್ಯಾಂಕಿನೊಂದಿಗೆ ತೇರ್ಗಡೆಗೊಂಡಿದ್ದರು.

ಬೆಂಗಳೂರಿನಲ್ಲಿ ಹಣಕಾಸು ಇಲಾಖೆ ಬಜೆಟ್ ಮತ್ತು ಸಂಪನ್ಮೂಲ ವಿಭಾಗದ ಉಪಕಾರ್ಯದರ್ಶಿಯಾಗಿದ್ದ ಸಿಂಧು ಬಿ.ರೂಪೇಶ್ ಅವರನ್ನು 2018ರ ನವೆಂಬರ್ ತಿಂಗಳಿನಲ್ಲಿ ಉಡುಪಿ ಜಿಪಂ ಸಿಇಒ ಕಾರ್ಯ ನಿರ್ವಹಿಸುತ್ತಿದ್ದರು.

1 thought on “ದ.ಕ. ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ರೂಪೇಶ್ ಐಎಎಸ್

Leave a Reply

Your email address will not be published. Required fields are marked *

error: Content is protected !!