ಮಾಡರ್ನ್ ಕೋಚ್ ಫ್ಯಾಕ್ಟರಿಗಳ ಖಾಸಗೀಕರಣ ಕೇಂದ್ರ ದ ಸಂಚು-ಸೋನಿಯಾ ಗಾಂಧಿ ಆತಂಕ
ನವದೆಹಲಿ: ರೈಲ್ವೆ ಕೋಚ್ಗಳನ್ನು ತಯಾರಿಸುವ ಮಾಡರ್ನ್ ಕೋಚ್ ಫ್ಯಾಕ್ಟರಿಯನ್ನು ಸದ್ದಿಲ್ಲದೇ ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಆರೋಪಿಸಿದರು. ತಮ್ಮ ಕ್ಷೇತ್ರವಾದ ರಾಯ್ ಬರೇಲಿಯಲ್ಲಿರುವ ಮಾಡರ್ನ್ ಕೋಚ್ ಫ್ಯಾಕ್ಟರಿಯನ್ನು ಕೇಂದ್ರ ಸರ್ಕಾರ ಖಾಸಗೀಕರಣ ಮಾಡಲು ಗುಪ್ತವಾಗಿ ಸಂಚು ನಡೆಸುತ್ತಿದೆ. ಇದರಿಂದ ಫ್ಯಾಕ್ಟರಿಯ ಉದ್ಯೋಗಿಗಳು ಮತ್ತು ಅವರ ಕುಟುಂಬಗಳ ಬದುಕಿಗೆ ತೊದರೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಲೋಕಸಭೆಯ ಶೂನ್ಯ ವೇಳೆಯಲ್ಲಿ ವಿಚಾರ ಪ್ರಸ್ತಾಪಿಸಿದ ಅವರು, ಖಾಸಗೀಕರಣವು ಸಾವಿರಾರು ಜನರು ನಿರುದ್ಯೋಗಿಗಳಾಗಲು ಕಾರಣವಾಗುತ್ತದೆ. ಅಲ್ಲದೆ, ಆ ಕಾರ್ಖಾನೆಯಲ್ಲಿ ಅಲ್ಲಿ ಸ್ಥಾಪಿಸಿದ ಉದ್ದೇಶಕ್ಕೂ ಇದು ವಿರುದ್ಧವಾಗಿದೆ ಎಂದು ವಿರೋಧ ವ್ಯಕ್ತಪಡಿಸಿದರು.
ಅತ್ಯಾಧುನಿಕ ಕಾರ್ಖಾನೆ ದೇಶದಲ್ಲಿನ ಉತ್ಪಾದನೆಯ ಚಟುವಟಿಕೆಯನ್ನು ಉತ್ತೇಜಿಸುವ ಸಲುವಾಗಿ ಯುಪಿಎ ಸರ್ಕಾರ ರಾಯ್ ಬರೇಲಿಯಲ್ಲಿ ಫ್ಯಾಕ್ಟರಿಯನ್ನು ನಿರ್ಮಿಸಿತ್ತು. ಕಡಿಮೆ ಬೆಲೆಗೆ ಉತ್ತಮ ಗುಣಮಟ್ಟದ ಕೋಚ್ಗಳನ್ನು ತಯಾರಿಸುವ ಅತ್ಯಂತ ಆಧುನಿಕ ಘಟಕ ಇದಾಗಿದೆ. ಮಾಡರ್ನ್ ಕೋಚ್ ಫ್ಯಾಕ್ಟರಿಯನ್ನು ಮತ್ತು ಇತರೆ ಸಾರ್ವಜನಿಕ ಉದ್ದಿಮೆಗಳನ್ನು ಉಳಿಸಬೇಕು ಮತ್ತು ಕಾರ್ಮಿಕರು ಹಾಗೂ ಅವರ ಕುಟುಂಬದವರನ್ನು ಗೌರವಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಸೋನಿಯಾ ಗಾಂಧಿ ಹೇಳಿದರು. ಮಾತ್ರವಲ್ಲದೆ, ಎಚ್ಎಎಲ್, ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಸೇರಿದಂತೆ ಕೆಲವು ಸಾರ್ವಜನಿಕ ವಲಯದ ಸಂಸ್ಥೆಗಳ ಪರಿಸ್ಥಿತಿಯ ಕುರಿತು ಸಹ ಅವರು ಕಳವಳ ವ್ಯಕ್ತಪಡಿಸಿದರು.