ಕೊನೆಯಾಸೆಯಂತೆ ಪೇಜಾವರ ಮಠಕ್ಕೆ ಶ್ರೀಗಳ ಆಗಮನ
ಉಡುಪಿ: ಪೇಜಾವರ ಶ್ರೀಗಳ ದೇಹಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದ್ದು, ಚಿಕಿತ್ಸೆಗೆ ಶ್ರೀಗಳ ದೇಹ ಸ್ಪಂದಿಸುತ್ತಿಲ್ಲ. ಹೀಗಾಗಿ ಗುರುಗಳ ಕೊನೆಯಾಸೆಯಂತೆ ಮಠಕ್ಕೆ ಕರೆತರಲು ಕಿರಿಯ ಶ್ರೀಗಳು ನಿರ್ಧಾರ ಮಾಡಿದ್ದಾರೆ. ಇಂದು ಬೆಳಿಗ್ಗೆ7.10 ಪೇಜಾವರ ಮಠಕ್ಕೆ ವೆಂಟಿಲೇಟರ್ನಲ್ಲಿ ಅಂಬುಲೆನ್ಸ್ ಮೂಲಕ ಶ್ರೀಗಳನ್ನ ತರಲಾಯಿತು
. ಶ್ರೀಗಳ ಮಠದ ಕೊಠಡಿಯಲ್ಲಿ ಮುಂದಿನ ಚಿಕಿತ್ಸೆಗೆ ವ್ಯವಸ್ಥೆ ಕೂಡ ಮಾಡಲಾಗಿದೆ. ಹೀಗಾಗಿ ಕೃಷ್ಣನೂರು ಉಡುಪಿಯಲ್ಲಿ ಆತಂಕದ ಛಾಯೆ ಮನೆ ಮಾಡಿದೆ. ಪೇಜಾವರ ಶ್ರೀಗಳು ಅಧೋಕ್ಷಜ ಮಠಕ್ಕೆ ಶಿಫ್ಟ್ ಆದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದ ಭಕ್ತರಿಗೆ ಮಠಕ್ಕೆ ಪ್ರವೇಶವನ್ನು ನಿರ್ಬಂಧ ಮಾಡಲಾಗಿದೆ. ಜೊತೆಗೆ ಪೇಜಾವರ ಮಠದ ಸುತ್ತಲೂ ಬಿಗಿ ಬಂದೋಬಸ್ತ್ ಮಾಡಲಾಗಿದೆ. ನಗರದಾದ್ಯಂತ 700 ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಮಠದ ಸುತ್ತ ವಾಹನ ಸಂಚಾರ ನಿರ್ಬಂಧ ಮಾಡಲಾಗಿದೆ. ಪೇಜಾವರ ಮಠದೊಳಗೆ ಭಕ್ತರ್ಯಾರು ಬರಬಾರದು, ಪೇಜಾವರ ಶ್ರೀ ಚಿಕಿತ್ಸೆಗೆ ತೊಂದರೆ ಮಾಡಬಾರದು ಎಂದು ಪೇಜಾವರ ಮಠದ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.