ಶ್ರೀ ಕೃಷ್ಣ ಮಠದಲ್ಲಿ ವಿಟ್ಲಪಿಂಡಿಯ ಮಹಾಪೂಜೆ

ಶ್ರೀಕೃಷ್ಣ ಮಠದಲ್ಲಿ ದೇವರಿಗೆ ವಿಟ್ಲಪಿಂಡಿಯಂದು  ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಗೋಪಾಲಕೃಷ್ಣನ  ಅಲಂಕಾರವನ್ನು ಮಾಡಿದರು.

ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ರಾತ್ರಿ ಕೃಷ್ಣ ದೇವರಿಗೆ ಲಕ್ಷ ತುಳಸಿ ಅರ್ಚನೆಯೊಂದಿಗೆ ಮಹಾಪೂಜೆಯನ್ನು ನೆರವೇರಿಸಿದರು.

ನಂತರ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಅದಮಾರು  ಕಿರಿಯ  ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು, ಗರ್ಭಗುಡಿಯೊಳಗೆ ಕೃಷ್ಣ ದೇವರಿಗೆ  ಅರ್ಘ್ಯ ನೀಡಿ ಚಂದ್ರೋದಯ ಸಮಯದಲ್ಲಿ(12 .12 ) ತುಳಸೀಕಟ್ಟೆಯಲ್ಲಿ ಚಂದ್ರನಿಗೆ  ಅರ್ಘ್ಯ ನೀಡಿದರು.

ನಂತರ ಭಕ್ತಾದಿಗಳಿಂದ ಅರ್ಘ್ಯಪ್ರಧಾನ ನಡೆಯಿತು.

Leave a Reply

Your email address will not be published. Required fields are marked *

error: Content is protected !!