ಸಹಕಾರ ಕ್ಷೇತ್ರ ಅಭಿವೃದ್ಧಿಗೆ ಸಿಬ್ಬಂದಿ ವರ್ಗದ ಸಹಕಾರ ಅಗತ್ಯ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ಸಹಕಾರ ಕ್ಷೇತ್ರ ಅಭಿವೃದ್ಧಿ ಹೊಂದಲು ಸಿಬ್ಬಂದಿ ವರ್ಗದ ಸಹಕಾರ ಅತೀ ಅಗತ್ಯವಾಗಿದೆ ಕೇಂದ್ರ ಮತ್ತು ರಾಜ್ಯ ಸರಕಾರ ಹೊರಡಿಸುವ ಆದೇಶಗಳನ್ನು ಗಮನಿಸಿಕೊಂಡು ಆ ದೆಸೆಯಲ್ಲಿಯೇ ಕಾರ್ಯವೈಖರಿ ಮಾಡಬೇಕು ಎಂದು ಉಡುಪಿ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

 

ಜಿಲ್ಲಾ ಸೌಹಾರ್ದ ಒಕ್ಕೂಟ ಮತ್ತು ಫಾರ್ಚೂನ್ ಇನ್ಫೋಸರ್ವ್ ಪ್ರೈವೇಟ್ ಲಿಮಿಟೆಡ್ ಬೆಳಗಾವಿ ಇವರ ಜಂಟಿ ಆಶ್ರಯದಲ್ಲಿ ಡಯಾನಾ ಹೋಟೇಲಿನ ಎ.ಸಿ ಸಭಾಂಗಣದಲ್ಲಿ ನಡೆದ ಸಹಕಾರಿ ಕ್ಷೇತ್ರ ಸಂವರ್ಧನೆಯಿಂದ ಸಮೃದ್ಧಿ ವ್ಯಕ್ತಿತ್ವ ವಿಕಸನ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಸೌಹಾರ್ದ ಒಕ್ಕೂಟದ ಅಧ್ಯಕ್ಷ ಶ್ರೀ. ಮಂಜುನಾಥ ಎಸ್.ಕೆ, ಅಧ್ಯಕ್ಷತೆ ವಹಿಸಿ ಪ್ರಪಂಚ ವೇಗವಾಗಿ ಬೆಳೆಯುತ್ತಿದ್ದು ನಮ್ಮ ಆರ್ಥಿಕತೆಯೂ ಅಭಿವೃದ್ಧಿ ಹೊಂದುತ್ತಿದೆ. ಬದಲಾಗುತ್ತಿರುವ ತಂತ್ರಜ್ಞಾನಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಇದರಿಂದ ನಮಗೆ ಲಾಭವಾಗುತ್ತದೆ ಕಡಿಮೆ ಬಡ್ಡಿದರದಲ್ಲಿ ಹೂಡಿಕೆ ಮಾಡುವಂತಹ ಉದ್ಯಮಗಳನ್ನು ಪ್ರೋತ್ಸಾಹಿಸಬೇಕು ತಂತ್ರಜ್ಞಾನಗಳನ್ನು ಸಮರ್ಥವಾಗಿ ಉಪಯೋಗಿಸುವುದರಿಂದ ಉತ್ತಮ ನಾಯಕರಾಗಲು ಸಾಧ್ಯ ಎಂದರು.

 

ಮಂಗಳೂರಿನ ಪ್ರಣವ ಸೌಹಾರ್ದ ಸಹಕಾರಿಯ ಅಧ್ಯಕ್ಷ ಜಿ.ಆರ್.ಪ್ರಸಾದ್ ಮಾತನಾಡಿ ಸಹಕಾರ ಕ್ಷೇತ್ರದ ವಾತಾವರಣ ವಿಷಮ ಸ್ಥಿತಿಯಲ್ಲಿದ್ದು ಅದನ್ನು ಉತ್ತಮವಾಗಿ ನಡೆಸಲು ಪ್ರೇರಪಿಸಬೇಕು ದೇಶದ ಆಗುಹೋಗುಗಳ ಬಗ್ಗೆ ತಿಳಿದುಕೊಂಡಿರಬೇಕು ವ್ಯವಹಾರ ಕ್ಷೇತ್ರದ ಬಗ್ಗೆ ಸಾಕಷ್ಟು ತಿಳಿದುಕೊಂಡಿರಬೇಕು ಇತ್ತೀಚೆನ ದಿನಗಳಲ್ಲಿ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆ ನಡೆಯುತ್ತಿದೆ ಆದರೆ ಸಹಕಾರಿ ಕ್ಷೇತ್ರದಲ್ಲಿ ಹಾಗಾಗುವುದಿಲ್ಲ ಭವಿಷ್ಯತ್ತಿನಲ್ಲಿ ಇದಕ್ಕೆ ಹಲವಾರು ಅವಕಾಶಗಳಿವೆ ಬ್ಯಾಂಕಿಂಗ್ ಚಟುವಟಿಕೆಯೊಂದಿಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಹಕಾರಿ ಕ್ಷೇತ್ರವನ್ನು ಸಮಾಜಕ್ಕೆ ಸ್ಪಂದಿಸುವಂತೆ ಮಾಡಬೇಕು ಎಂದರು.

 

ಬೆಳಗಾವಿ ಫಾರ್ಚೂನ್ ಇನ್ಫೋಸರ್ವ್ ಪ್ರೈವೇಟ್ ಲಿ.,ಬೆಳಗಾವಿ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಪ್ರವೀಣ್ ಬಂಗೋಡಿ, ಮಂಗಳೂರಿನ ವಿಶ್ವ ಬೆಳಕು ಸೌಹಾರ್ದ ಸಹಕಾರಿಯ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್, ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀ ಭುವನೇಶ್ ಪ್ರಭು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!