ಅಲ್ಪಸಂಖ್ಯಾತರು ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸಿ : ಕೆ.ಎ.ಯಾಕುಬ್ ಕರೆ

ಮಡಿಕೇರಿ: ಅಲ್ಪಸಂಖ್ಯಾತರು ಯಾವುದೇ ಕಾರಣಕ್ಕು ವಿಂಗಡಣೆಯಾಗದೆ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುವ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಹೆಚ್ಚು ಕಾರ್ಯಪ್ರವೃತ್ತರಾಗಬೇಕು ಎಂದು ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕೆ.ಎ.ಯಾಕುಬ್ ಸಲಹೆ ನೀಡಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧಿಕಾರ ಹಸ್ತಾಂತರ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು, ಹಿಂದಿನಿಂದಲೂ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶೇ. 98ರಷ್ಟು ಅಲ್ಪಸಂಖ್ಯಾತರ ಮತಗಳೇ ಕಾರಣ. ಕಾಂಗ್ರೆಸ್ ಸರಕಾರವಿದ್ದಾಗ ಅಲ್ಪಸಂಖ್ಯಾತರ ಏಳಿಗೆಗಾಗಿ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ. ಹಲವರು ಪಕ್ಷದಿಂದ ಫಲವನ್ನು ಪಡೆದಿದ್ದಾರೆ, ಆದರೆ ಪಕ್ಷಕ್ಕೆ ಅವರ ಕೊಡುಗೆ ಕೇವಲ ಶೂನ್ಯ ಎಂದು ಯಾಕುಬ್ ಬೇಸರ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷ ಎ. ಕೆ. ಹ್ಯಾರಿಸ್ ಮಾತನಾಡಿ, ಪಕ್ಷದ ಹಿರಿಯ ಮುಖಂಡರ ಸಲಹೆ ಸೂಚನೆಯಂತೆ ತಾನು ಪಕ್ಷದಲ್ಲಿ ಕಾರ್ಯನಿರ್ವಹಿಲಿದ್ದೇನೆ. ತನ್ನ ಬಾಲ್ಯವನ್ನು ಹೆಚ್ಚಾಗಿ ಗ್ರಾಮದಲ್ಲಿ ಕಳೆದಿರುವುದರಿಂದ ಗ್ರಾಮಗಳ ಸಮಸ್ಯೆಗಳ ಬಗ್ಗೆ ಅರಿವಿದೆ. ಆ ನಿಟ್ಟಿನಲ್ಲಿ ಗ್ರಾಮಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸಿ ಪಕ್ಷದ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು.

 ಅಲ್ಪಸಂಖ್ಯಾತರ ಘಟಕದ ನೂತನ ಪದಾಧಿಕಾರಿಗಳಿಗೆ ಇದೇ ಸಂದರ್ಭ ಅಧಿಕಾರ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಹ್ಯಾರಿಸ್ ಎಡಪಾಲ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದಸ ಸುರಯ್ಯ ಅಬ್ರಾರ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಮ್ಯಾಥ್ಯು ಮತ್ತಿತರ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!