ಸುಳ್ಯ: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರು ಡಿಕ್ಕಿ,ಮೂವರ ಸಾವು

ಸುಳ್ಯ:ಅಟೋರಿಕ್ಷಾವನ್ನು ಓವರ್ ಟೇಕ್ ಮಾಡುವ ಬರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಸುಳ್ಯದ ಅರಂಬೂರು ಸಮೀಪ ನಡೆದಿದೆ.ಮೃತರನ್ನು ಚೆನ್ನಪಟ್ಟಣ ಮೂಲದ ಮಂಜುಳ, ನಾಗೇಂದ್ರ , ಸೋಮಣ್ಣ ಎಂದು ಗುರುತಿಸಲಾಗಿದೆ.
ಕೊಳ್ಳೆಗಾಲ ಡಿಪೋಗೆ ಸೇರಿದ ಕೆ.ಎಸ್.ಆರ್.ಟಿ.ಸಿ. ಬಸ್ ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ವೇಳೆ ಬೆಂಗಳೂರು ಸಮೀಪದ ರಾಮನಗರದಿಂದ ಮಂಗಳೂರಿಗೆ ತೆರಳುತ್ತಿದ್ದ ರಿಡ್ಜ್ ಕಾರು ಅರಂಬೂರು ಸಮೀಪ ರಿಕ್ಷಾವೊಂದನ್ನು ಓವರ್‌ಟೇಕ್ ಮಾಡುವ ಯತ್ನದಲ್ಲಿ ಬಸ್‌ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಂಜುಳಾ ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ನಾಗೇಂದ್ರ ಹಾಗೂ ಸೋಮಣ್ಣ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!