ಜುಲೈ 9 ರ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆಗೆ ಬೆಂಬಲ
ಉಡುಪಿ: ಶಿಕ್ಷಕರ ವರ್ಗಾವಣೆ,ಪದವೀಧರ ಶಿಕ್ಷಕರ ಸಮಸ್ಯೆ ಪರಿಹಾರ, ಎನ್.ಪಿ.ಎಸ್.ಯೋಜನೆಯನ್ನು ರದ್ದು ಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜುಲೈ 9 ರಂದು ರಾಜ್ಯಾಧ್ಯಂತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಹಮ್ಮಿಕೊಂಡಿರುವ ಪ್ರತಿಭಟನೆಗೆ ವಿಕಲಚೇತನ ನೌಕರರ ಸಂಘದ ಸಂಪೂರ್ಣ ಬೆಂಬಲವಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ.
ಪ್ರಾಥಮಿಕ ಶಾಲಾ ಶಿಕ್ಷಕರನ್ನು 1 – 5ನೇ ತರಗತಿ ಬೋಧಿಸುವ ಶಿಕ್ಷಕರು ಎಂದು ಪರಿಗಣಿಸುವುದನ್ನು ಕೈ ಬಿಟ್ಟು 1 – 8ನೇ ತರಗತಿ ಬೋಧಿಸುವ ಶಿಕ್ಷಕರೆಂದು ಪರಿಗಣಿಸಬೇಕು, ಶೇಕಡಾ 20 ರಷ್ಟು ಹುದ್ದೆಗಳು ಖಾಲಿ ಇರಬೇಕು ಎಂಬ ನಿಯಮವನ್ನು ಕೈ ಬೀಡಬೇಕು, ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಮಾಡಬೇಕು,ರಾಜ್ಯದ ಪ್ರತಿಯೊಂದು ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ.ತರಗತಿಯನ್ನು ಪ್ರಾರಂಭ ಮಾಡಬೇಕು, ಮುಖ್ಯ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿಯನ್ನು ನಿಗದಿ ಮಾಡಬೇಕು ಎಂಬ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜುಲೈ 9 ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳನ್ನು ಬಂದ ಪ್ರತಿಭಟನೆ ಮಾಡುವ ಕಾರ್ಯದಲ್ಲಿ ವಿವಿಧ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ವಿಕಲಚೇತನ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಾಲಾ ಬಂದ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.