ಕಾಂಗ್ರೆಸ್ ಪಕ್ಷದ ಆದೇಶದಂತೆ ಚುನಾವಣೆಯಲ್ಲಿ ಜೆಡಿಎಸ್ಗೆ ಬೆಂಬಲ


ಉಡುಪಿ :ಇತ್ತೀಚೆಗೆ ನಡೆದ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಾತ್ಯಾತೀತ ಜನತಾ ದಳದ ಜೊತೆ ಮಾಡಿಕೊಂಡ ಮೈತ್ರಿ ಯಿಂದಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಿತ್ತು ಮತ್ತು ಈ ಸಮಯದಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಆದೇಶದ ಪ್ರಕಾರವೇ ಜನತಾ ದಳದ ಪರ ಚುನಾವಣಾ ಪ್ರಚಾರ ಮಾಡಿದ್ದರು. 
ಈ ಮೈತ್ರಿ ಕೇವಲ ಲೋಕ ಸಭಾ ಚುನಾವಣೆಗೆ ಮಾತ್ರ ಸೀಮಿತವಾಗಿದ್ದು ಅದರ ನಂತರ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದಲ್ಲಿಯೇ ಮುಂದುವರಿಯುತ್ತಾರೆ ಹಾಗಾಗಿ ಸದ್ಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ ಮತ್ತು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಸದಸ್ಯತ್ವವನ್ನು ಪಡೆಯಲು ಅರ್ಜಿ ಹಾಕಿಲ್ಲ ಎಂಬ ಗೊಂದಲಮಯವಾದ ಹೇಳಿಕೆ ಯಾವ ಅರ್ಥದಲ್ಲಿ ನೀಡಿದರು ಎಂಬುದು ನಮಗೆ ತಿಳಿದಿಲ್ಲ ಎಂದು ಉಡುಪಿ ನಗರ ಸಭಾ ಸದಸ್ಯರಾದ ರಮೇಶ್ ಕಾಂಚನ್ ,ವಿಜಯ ಪೂಜಾರಿ ಬೈಲೂರು, ಅಮ್ರತಾ ಕ್ರಿಷ್ಣ ಮೂರ್ತಿ ಸೆಲಿನಾ ಕರ್ಕಡ ಇವರು  ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!