ಟ್ಯಾಕ್ಸಿ ಮತ್ತು ಆಟೋ ಯೂನಿಯನ್ ಸಭೆ ರಘುಪತಿ ಭಟ್ ಭಾಗಿ

ಉಡುಪಿ ಶಾಸಕರಾದ ಕೆ ರಘುಪತಿ ಭಟ್ ಇವರು ಟ್ಯಾಕ್ಸಿ ಮತ್ತು ಆಟೋ ಯೂನಿಯನ್ ಜೊತೆ ನಡೆದ ಸಭೆಯಲ್ಲಿ ಭಾಗವಹಿಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕರು ಶಾಲಾ ವಾಹನದ ಹೊರತಾದ ರಿಕ್ಷಾ, ಟೆಂಪೋ ಅಥವಾ ಇನ್ನಿತರ ವಾಹನಗಳಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾರೆ. ಆದರೆ ಇಂತಹಾ ಸನ್ನಿವೇಶಗಳಲ್ಲಿ ಅವಘಡಗಳು ಹೆಚ್ಚಾಗಿ ಸಂಭವಿಸುತ್ತದೆ. ಹೀಗಾಗಿ ಈ ಬಗ್ಗೆ ಮುಂಚಿತವಾಗಿ ಜಾಗೃತಿ ಮೂಡಿಸುವ ಅಗತ್ಯ ಇದೆ.

ಇಂದು ಪೊಲೀಸ್ ಇಲಾಖೆಯವರು ಇದರ ಬಗ್ಗೆ ವಿಶೇಷ ಆಸಕ್ತಿ ವಹಿಸಿ ಕೆಲಸ ಮಾಡುತ್ತಿದ್ದಾರೆ. ಇದು ಕೇವಲ ಪೊಲೀಸ್ ಇಲಾಖೆ ಮಾತ್ರವಲ್ಲ, ನಮ್ಮೆಲ್ಲರ ಜವಬ್ಧಾರಿಯೂ ಹೌದು.

ಶಿಸ್ತು ಹಾಗೂ ಕಾನೂನನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯ ಎಂದು ಹೇಳಿದರು. ಸಭೆಯಲ್ಲಿ ಪೊಲೀಸ್ ವೃತ್ತ ನಿರೀಕ್ಷಕರು,ಪೊಲೀಸ್ ಉಪ ನಿರೀಕ್ಷಕರು, ಸಂಚಾರಿ ಪೊಲೀಸ್ ಅಧಿಕಾರಿಗಳು ಯೂನಿಯನ್ ಸದಸ್ಯರಿಗೆ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!