ಭಯೋತ್ಪಾದನೆ ಮುಕ್ತ ಭಾರತ ಸಂಕಲ್ಪ: ಗೃಹ ಸಚಿವ ಬೊಮ್ಮಾಯಿ

ಉಡುಪಿ: ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ಮತ್ತು ಶ್ರದ್ದೆಯಿಂದ 71 ನೇ ಗಣರಾಜ್ಯೋತ್ಸವ ಆಚರಣೆ ಇಂದು ನಡೆಯಿತು. ಅಜ್ಜರಕಾಡು ಮಹತ್ಮಾಗಾಂಧಿ ಮೈದಾನದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ಸಚಿವರು ಗೌರವ ವಂದನೆ ಸ್ವೀಕರಿಸಿದರು. ಪೊಲೀಸ್ ಮತ್ತು ವಿವಿಧ ಶಾಲಾ ಕಾಲೇಜ್‌ಗಳ ವಿದ್ಯಾರ್ಥಿ ತಂಡಗಳಿಂದ ನಡೆದ ಆಕರ್ಷಕ ಪಥಸಂಚಲನ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು.


ಗಣರಾಜ್ಯೋತ್ಸವ ಸಂದೇಶ ನೀಡಿದ ಗೃಹ ಸಚಿವರು ,ಈ ಹಿಂದೆ ಭಾರತದ ಮುಂದಿದ್ದ ಸವಾಲು ಬ್ರಿಟಿಷರನ್ನು ಹಿಮ್ಮೆಟ್ಟಿಸುವುದಾಗಿತ್ರು.ಆದರೆ ಈಗ ದೇಶದ ಮುಂದೆ ಹಲವು ಸವಾಲುಗಳಿವೆ.ಆ ಸವಾಲುಗಳನ್ನು ಭಾರತ ಒಂದೊಂದಾಗಿ ಎದುರಿಸಿ ಗೆಲ್ಲುತ್ತಿದೆ.ನಮ್ಮದು ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವಾಗಿದೆ.ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಕೆಲಸ ಮಾಡಿದ ಮಹನೀಯರನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು. ರಾಜ್ಯದ ಆರ್ಥಿಕತೆಗೆ ಪುಷ್ಠಿ ನೀಡುವ ಕರಾವಳಿಯನ್ನು ಪೂರ್ಣ ಪ್ರಮಾಣದಲ್ಲಿ ಇದುವರೆಗೂ ಬಳಸಿಕೊಳ್ಳಲು ಸಾಧ್ಯವಾಗಿಲ್ಲ,ಕರಾವಳಿಯ ಬಂದರುಗಳನ್ನು ಸಮಗ್ರ ರೀತಿಯಲ್ಲಿ ಅಭಿವೃದ್ದಿ ಪಡಿಸಿ, ಆಮದು ರಫ್ತು ಪ್ರಮಾಣವನ್ನು ಹೆಚ್ಚು ಮಾಡುವ ಮೂಲಕ ಹಾಗೂ ಒಳನಾಡು ಸಾರಿಗೆ ಮತ್ತು ಸಂಪರ್ಕ ರಸ್ತೆಗಳನ್ನು ಅಭಿವೃಧ್ದಿಗೊಳಿಸುವ  ಮೂಲಕ, ಪ್ರವಾಸೋದ್ಯವನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ದಿಗೊಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ದೇಶ ವಿದೇಶದ ಪ್ರವಾಸಿಗರನ್ನು ಆಕರ್ಷಿಸಬೇಕಿದೆ , ಇಲ್ಲಿ ಟೆಂಪಲ್ ಟೂರಿಸಂ ಮತ್ತು ಹೆಲ್ತ್ ಟೂರಿಸಂ ಅಭಿವೃಧಿಪಡಿಸಬೇಕು, ಮೀನುಗಾರಿಕೆಗೆ  ಆಧುನಿಕ ತಂತ್ರಜ್ಞಾನ ಮತ್ತು ಉಪಕರಣಗಳನ್ನು ನೀಡುವ ಮೂಲಕ , ಕರಾವಳಿ ಪ್ರದೇಶವನ್ನು ಸಮಗ್ರವಾಗಿ ಅಭಿವೃದ್ದಿಗೊಳಿಸಲು ಚಿಂತನೆ ನಡೆದಿದೆ ಎಂದರು.
 

ಶಾಂತಿ ಸಾಮರಸ್ಯ ಈಗ ಹಿಂದೆಂದಿಗಿಂತ ಹೆಚ್ಚು ಅಗತ್ಯ. ಸರ್ವರನ್ನೂ ಸಮನಾಗಿ ನೋಡುವುದು ನಮ್ಮ ಆಶಯ. ದೇಶದ ಶಾಂತಿ ಸುವ್ಯವಸ್ಥೆಗೆ ಜನರ ಸಹಕಾರವೂ ಅಗತ್ಯ.ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸಿ ಅಶಾಂತಿ ಉಂಟು ಮಾಡುವ ಹುನ್ನಾರ ಮೂರು ದಶಕಗಳಿಂದಲೂ ನಡೆದಿವೆ. ಬಲಿಷ್ಠ ,ಶಾಂತಿಯುತ ರಾಷ್ಟ್ರ ನಿರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ.ಭಯೋತ್ಪಾದನೆ ಮುಕ್ತ ಭಾರತ ಮಾಡಲು ನಾವು ಸಂಕಲ್ಪ ಮಾಡಬೇಕು ಎಂದರು.

ಸರ್ಕಾರವು ದೇಶದ ಶಾಂತಿ ಸುವ್ಯವಸ್ಥೆಗೆ ಮೊದಲ ಪ್ರಾಶಸ್ತ್ಯ ನೀಡಿದ್ದು, ಸರ್ವರಿಗೂ ಸಮಾನತೆ ನೀಡಿದೆ, ದೇಶದ ಅಭಿವೃಧ್ದಿಯನ್ನು ಕೆಲವು ಶಕ್ತಿಗಳಗೆ ಸಹಿಸಲು ಸಾಧ್ಯವಾಗದೇ , ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸುವ ಹುನ್ನಾರ ತೋರುತ್ತಿದ್ದು, ಇದನ್ನು ಸಮರ್ಥವಾಗಿ ಎದುರಿಸಲಾಗಿದೆ, ಅಂತಹ ಯಾವುದೇ ಕೃತ್ಯಗಳಿಗೆ ಅವಕಾಶ ನೀಡದೇ ದೇಶವನ್ನು ಭಯೋತ್ಪಾದನಾ ಮುಕ್ತ ರಾಷ್ಟ್ರವನ್ನಾಗಿ ಮಾಡಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಅತ್ಯುನ್ನತ ಸಾಧನೆ ತೋರಿದ ಸರ್ಕಾರಿ ನೌಕರರಾದ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ. ಎಚ್. ಕೆಂಪೇಗೌಡ, ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕ ಹಾಗೂ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಬಿ.ಕೆ. ಕುಸುಮಾಧರ, ಮೀನುಗಾರಿಕೆ ಉಪನಿರ್ದೇಶಕ ಗಣೇಶ್ ಕೆ., ಜಿ.ಪಂ. ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವ, ಜಿಲ್ಲಾಧಿಕಾರಿಯವರ ಕಚೇರಿ ಅಧೀPಕ ಕೆ. ರಾಮಮೋಹನ್ ಹೆಬ್ಬಾರ್, ಐ.ಟಿ.ಡಿ.ಪಿ. ಯೋಜನಾ ಸಮನ್ವಯಾಧಿಕಾರಿ ಕಚೇರಿ ಪ್ರಭಾರ ಕಚೇರಿ ಅಧೀPಕ ವಿಶ್ವನಾಥ, ಕಾಪು ಹೋಬಳಿ ಕಂದಾಯ ನಿರೀPಕ ಕೆ. ರವಿಶಂಕರ್, ಕಾಡೂರು ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ., ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಿರಿಯ ಆರೋಗ್ಯ ಸಹಾಯಕ ಬಿ.ವಿ. ಶಿವರಾಮ ರಾವ್, ಪೇತ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮಂಜುನಾಥ ನಾಯ್ಕ ರವರನ್ನು ಸನ್ಮಾನಿಸಲಾಯಿತು.

ಕೃಷಿ ಪ್ರಶಸ್ತಿ ಯೋಜನೆಯಡಿ ಜಿಲ್ಲಾಮಟ್ಟದಲ್ಲಿ ಪ್ರಶಸ್ತಿ ಪಡೆದ 13 ಮ೦ದಿ ರೈತರನ್ನು ಸನ್ಮಾನಿಸಲಾಯಿತು.ಗಣರಾಜ್ಯೋತ್ಸವ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಪಥ ಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಗಳನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಶಾಸಕ ರಘುಪತಿ ಭಟ್, ಉಡುಪಿ ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಪ್ರೀತಿ ಗೆಹಲೋತ್, ಎಸ್ಪಿ ವಿಷ್ಣುವರ್ಧನ, ಕರಾವಳಿ ಕಾವಲು ಪಡೆಯ ಎಸ್ಪಿ ಚೇತನ್ , ಎಎಸ್‌ಪಿ ಕುಮಾರ ಚಂದ್ರ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು , ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!