ಕೊಳೆತ ಸ್ಥಿತಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ

ಉಡುಪಿ: ವೃದ್ಧೆಯೋರ್ವರ ಮೃತ ದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಭ್ರಮಣ್ಯ ನಗರ ವಾರ್ಡಿನ ಅರಿತೋಡು ಸುಭ್ರಮಣ್ಯ ದೇವಸ್ಥಾನದ ಬಳಿ ಇರುವ ಮನೆಯಲ್ಲಿ, ಒಂಟಿಯಾಗಿ ವಾಸಿಸುತ್ತಿದ್ದ ವೃದ್ದೆಯ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ ನಡೆದಿದೆ.

ವೃದ್ಧೆ ಮೃತಪಟ್ಟು 4 ದಿನಗಳು ಕಳೆದಿರ ಬಹುದೆಂದು ಅಂದಾಜಿಸಲಾಗಿದೆ. ವೃದ್ಧೆಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೀಶಾ ಜೇಮ್ಸ್, ಹಾಗೂ ಶ್ವಾನದಳ, ಬೆರಳಚ್ಚು ತಜ್ಞರು, ಘಟನಾ ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಉಡುಪಿ ಠಾಣೆಯಲ್ಲಿ ಪರಕರಣ ದಾಖಲು.

 ಮೃತ ವೃದ್ಧೆ ರತ್ನಾವತಿ ಜೆ ಶೆಟ್ಟಿ,(80 ) ಗಂಡ ದಿ.ಗೋಪಾಲ ಶೆಟ್ಟಿ ಎಂದು ತಿಳಿದು ಬಂದಿದೆ.  ಶವ ಎತ್ತಲು ಹಾಗೂ ಶವವನ್ನು ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಉಚಿತ ಅಂಬುಲೇನ್ಸ್ ಸೇವೆ ನೀಡಿ ಇಲಾಖೆಗೆ ಸಹಕರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!