ಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ವಿಧಿ ವಶ

ಮಂಗಳೂರು – ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ (70) ಅನಾರೋಗ್ಯದಿಂದ ಇಂದು (ಅ 11 ರಂದು )ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೋಪಾಲನಾಥ್ ರವರು ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನವರು
ಬಾಲ್ಯದಿಂದಲೂ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಅವರು , ತನ್ನ ತಂದೆಯಿಂದಲೇ ಮಾರ್ಗದರ್ಶನ ಪಡೆದು ತನ್ನ ತಂದೆಯನ್ನ ಗುರುವಾಗಿ ಸ್ವೀಕರಿಸಿದ್ದರು ಗೋಪಾಲನಾಥ್ ರವರ ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸಕರಾಗಿದ್ದರು .

ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಯವರ ಮುಡಿಗೇರಿತ್ತು

ಪತ್ನಿ ಮತ್ತು ಪುತ್ರ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ, ಬಂಧುಗಳನ್ನು, ಹಾಗು ತನ್ನ ಅಭಿಮಾನಿಗಳನ್ನು ಅಪಾರ ಅಗಲಿದ್ದಾರೆ. ಮಂಗಳೂರು ಪದವಿನಂಗಡಿ ಮನೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!