ಮತ್ತೆ ಯೆಲ್ಲೋ ಅಲರ್ಟ್, ಎರಡು ದಿನ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ಮತ್ತೆ ಎರಡು ದಿನ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮಂಗಳವಾರ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಬುಧವಾರ ಮತ್ತು ಗುರುವಾರ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ. ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ ಎಂದು ಹವಾಮಾನ ಇಲಾಖೆಯ ಮಾಹಿತಿ ನೀಡಿದ್ದಾರೆ.

ಮಳೆಯ ಅಬ್ಬರಕ್ಕೆ ಕೊರೊನಾ ಮಹಾಮಾರಿ ಹೆಚ್ಚಾಗುವ ಭೀತಿ ಈಗ ಎದುರಾಗಿದೆ. ತಂಪಾದ ವಾತಾವರಣದಲ್ಲಿ ಕೊರೊನಾ ವೈರಸ್ ಬೇಗ ಹರಡುತ್ತದೆ. ಆದ್ದರಿಂದ ಮನೆಯಿಂದ ಹೊರ ಬರಬೇಡಿ, ಮನೆಯಲ್ಲೇ ಇರಿ ಎನ್ನುವ ಸಲಹೆ ವ್ಯಕ್ತವಾಗಿದೆ. 

Leave a Reply

Your email address will not be published. Required fields are marked *

error: Content is protected !!