ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಉಡುಪಿ – ಅವಳಿ ಜಿಲ್ಲೆಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಆರಂಭವಾಗಿದ್ದು ಬೆಳಗ್ಗೆ 10 .15 ರಿಂದ ಮದ್ಯಾಹ್ನ 12 .30 ರವರೆಗೆ ನಡೆಯಲಿದೆ. ಪರೀಕ್ಷಾ ಸಮಯದಲ್ಲಿ ಆಗುವ ಅಕ್ರಮ ತಡೆಗಟ್ಟುವಲ್ಲಿ ಸಿ ಸಿ ಟಿವಿಯನ್ನು ಅಳವಡಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ 27 ಮತ್ತು ದ.ಕ ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದೆ. ಉಡುಪಿಯಲ್ಲಿ 15,100 ಮತ್ತು ದ.ಕನ್ನಡದಲ್ಲಿ 34,346 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಪರೀಕ್ಷೆ ಸಮಯದಲ್ಲಿ ಖುದ್ದಾಗಿ ಎ ಟಿ ಸಿ ಸದಾಶಿವ ಪ್ರಭು ಹಾಗು ತಹಶೀಲ್ದರರಾದ ಪ್ರದೀಪ್ ವರ್ಣೇಕರ್ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪ್ರಶ್ನೆ ಪತ್ರಿಕೆ ಹಂಚಿದರು, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ 8 ತಂಡಗಳನ್ನು ಉಡುಪಿ ಜಿಲ್ಲೆಯಲ್ಲಿ ರಚಿಸಲಾಗಿದೆ. ಪ್ರಶ್ನೆಪತ್ರಿಕೆ ಸಾಗಿಸುವ ಎಲ್ಲ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದ್ದು, ಸೂಕ್ತ ಪೊಲೀಸ್ ಭದ್ರತೆಯೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಅವಧಿಯೊಳಗೆ ಪ್ರಶ್ನೆ ಪತ್ರಿಕೆ ತಲುಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.