ಪೋಲಿ ಹುಡುಗರಿಗೆ ಲಾಠಿ ರುಚಿ ತೋರಿಸಿದ ಪೊಲೀಸರ ವಿಡಿಯೋ ವೈರಲ್

ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ಹಿನ್ನಲೆ, ಯುವಕರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟದಲ್ಲಿ ನಡೆದ ಘಟನೆ. ಕೇರಳದ ಮಲಪುರಂ ವ್ಯಕ್ತಿಗಳಿಗೆ ಪೊಲೀಸರು ಥಳಿಸಿದ ವೀಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಾಲಿಬೆಟ್ಟದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ ಕೇರಳ ಮೂಲದ ಮಹಮ್ಮದ್ ಫುತಾಲಿಕ್ (32), ಶರೀಫ್ (30) ಗೆ , ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಕೇರಳದಿಂದ ಕಾರಿನಲ್ಲಿ ಬಂದು ಕಾಲೇಜು ಮುಂಭಾಗ ನಿಂತು ಅಸಭ್ಯವಾಗಿ ವರ್ತಿಸುತ್ತಿದ್ದರು. ಕಾಲೇಜು ಪ್ರಾಂಶುಪಾಲರು ದೂರಿನ ಮೇರೆಗೆ ಪಾಲಿಬೆಟ್ಟ ಉಪಠಾಣೆ ಪೊಲೀಸರ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!