ಕಾಂಗ್ರೆಸ್ ತೊರೆಯುವ ಪ್ರಶ್ನೆಯೇ ಇಲ್ಲ: ಮಾರ್ಗರೇಟ್ ಆಳ್ವಾ

ಉಡುಪಿ : ಕಾಂಗ್ರೆಸ್ ಪಕ್ಷ ನನಗೆ ಎಲ್ಲ ಅವಕಾಶ ಕೊಟ್ಟಿದೆ. ಪ್ರಾಥಮಿಕ ಸದಸ್ಯತ್ವದಿಂದ ರಾಜ್ಯಪಾಲ ವರೆಗಿನ ದೊಡ್ಡ ದೊಡ್ಡ ಹುದ್ದೆಗಳನ್ನು ನೀಡಿದೆ. ಜವಾಬ್ದಾರಿಯಿಂದ ಎಲ್ಲಾ ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಇಷ್ಟು ಅವಕಾಶಗಳನ್ನು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ನಾನು ಖಂಡಿತ ದ್ರೋಹ ಬಗೆಯಲಾರೆ. ನಾನು ಎಂದೆಂದಿಗೂ ಕಾಂಗ್ರೆಸ್ ಪಕ್ಷದವಳು ಎಂದು ಹಿರಿಯ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾ ‘ಉಡುಪಿ ಟೈಮ್ಸ್’ ಗೆ ಸ್ಪಷ್ಟಪಡಿಸಿದ್ದಾರೆ.

ಹಲವು ದಿನಗಳಿಂದ ಕೆಲವೊಂದು ಮಾಧ್ಯಮಗಳಲ್ಲಿ ಮಾರ್ಗರೇಟ್ ಆಳ್ವಾ ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಸುದ್ದಿ ಹಬ್ಬಿತ್ತು. ಇಂದು ‘ಉಡುಪಿ ಟೈಮ್ಸ್’ ಜೊತೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

’10 ವರುಷ ಕೇಂದ್ರ ಸಚಿವೆ, 1 ಅವಧಿಗೆ ಲೋಕಸಭಾ ಸದಸ್ಯ, 4 ಬಾರಿ ರಾಜ್ಯಸಭಾ ಸದಸ್ಯ, 5 ಅವಧಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಹಿತ ವಿವಿಧ ಹುದ್ದೆಗಳನ್ನು ಕಾಂಗ್ರೆಸ್ ಪಕ್ಷ ನನಗೆ ನೀಡಿದೆ. ನೀಡಿದ ಎಲ್ಲಾ ಹುದ್ದೆಗಳನ್ನು ಜವಾಬ್ದಾರಿಯಿಂದ ಮುನ್ನಡೆಸಿ, ಪಕ್ಷಕ್ಕೆ ನನ್ನಿಂದ ಸಾಧ್ಯವಾದಷ್ಟು ಸೇವೆಯನ್ನು ಸಲ್ಲಿಸಿದ್ದೇನೆ. ಇಂತಹ ಅವಕಾಶವನ್ನು ನೀಡಿದ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿ ಪಕ್ಷಕ್ಕೆ ಸೇರುವ ಮಾತೇ ಇಲ್ಲ. ಬಿಜೆಪಿಗೆ ನಾನು ಸೇರ್ಪಡೆಯಾಗುವ ವರದಿ ಶುದ್ಧ ಸುಳ್ಳು ಎಂದು ಮಾರ್ಗರೆಟ್ ಆಳ್ವಾ ಉಡುಪಿ ಟೈಮ್ಸ್ ಗೆ ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!