ಈ ವಾರ`ಪ್ರೀಮಿಯರ್ ಪದ್ಮಿನಿ` ಚಿತ್ರ ರಾಜ್ಯಾದ್ಯಂತ ಬಿಡುಗಡೆ

ಶ್ರುತಿ ನಾಯ್ಡು ಚಿತ್ರ ಲಾಂಛನದಲ್ಲಿ ಶ್ರುತಿ ನಾಯ್ಡು ಜೆ ಅವರು ನಿರ್ಮಿಸಿರುವ, ನವರಸ ನಾಯಕ ಜಗ್ಗೇಶ್ ನಾಯಕರಾಗಿ ನಟಿಸಿರುವ ಪ್ರೀಮಿಯರ್ ಪದ್ಮಿನಿ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ರಮೇಶ್ ಇಂದಿರಾ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಹಾಗೂ ರಾಜೇಂದ್ರ ಅರಸ್ ಅವರ ಸಂಕಲನವಿದೆ. ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ, ಡಿಫ್ರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಕೃಷ್ಣ ಸಾರ್ಥಕ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ನವರಸ ನಾಯಕ, ಜಗ್ಗೇಶ್, ಮಧುಬಾಲ, ಸುಧಾರಾಣಿ, ಪ್ರಮೋದ್, ಹಿತ ಚಂದ್ರಶೇಖರ್, ವಿವೇಕ್ ಸಿಂಹ, ರಮೇಶ್ ಇಂದಿರಾ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!