ಸಿಎಎ ವಿರೋಧದ ‘ತುಕ್ಡೆ ತುಕ್ಡೆ’ ಗ್ಯಾಂಗ್‌ ಸೋಲಿಸುವ ಸಮಯ ಬಂದಿದೆ: ಅಮಿತ್ ಶಾ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿಚಾರದಲ್ಲಿ ಪ್ರತಿಪಕ್ಷಗಳು ಜನರಿಗೆ ಇಲ್ಲ ಸಲ್ಲದ ವಿಚಾರಗಳನ್ನು ಹೇಳಿ ದೇಶದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ದೇಶದ ನಾಗರಿಕರಿಗೆ ವದಂತಿಗಳನ್ನು ಹಬ್ಬಿಸುವ ಮೂಲಕ ಪ್ರತಿಪಕ್ಷಗಳು ದೇಶದಲ್ಲಿ ಅಶಾಂತಿ ಸೃಷ್ಠಿಸುತ್ತಿವೆ. ಕಳೆದ 15 ದಿನಗಳಿಂದ ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದರು.

ಇನ್ನು ಮುಂದಿನ ವರ್ಷ ದೆಹಲಿಯ ವಿಧಾನಸಭೆ ಚುನಾವಣೆ ನಡೆಯಲಿದೆ. ಇಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದ್ದು ಇಲ್ಲಿರುವ ತುಕ್ಡೆ ತುಕ್ಡೆ ಗ್ಯಾಂಗ್ ಅನ್ನು ನಿರ್ಣಾಮ ಮಾಡುವ ಸಮಯ ಬಂದಿದೆ ಎಂದು ದೆಹಲಿ ಡೆವಲಪ್ ಮೆಂಟ್ ಅಥಾರಿಟಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಮಿತ್ ಶಾ ಗುಡುಗಿದ್ದಾರೆ.

ಪೊಲೀಸರು ತಮ್ಮ ಕೆಲಸವನ್ನು ತಾವು ಮಾಡುತ್ತಿದ್ದಾರೆ. ದೇಶದಲ್ಲಿ ಶಾಂತಿಯನ್ನು ಪುನಃ ಸ್ಥಾಪಿಸುವ ಕೆಲಸವನ್ನು ಸರ್ಕಾರ ಮಾಡಬಾರದಾ ಎಂದು ನಾನು ಪ್ರತಿಪಕ್ಷಗಳ ಕೇಳಲು ಬಯಸುತ್ತೇನೆ. ಸಂಸತ್ತಿನಲ್ಲಿ ಸಿಎಎ ಕುರಿತು ಚರ್ಚೆಯ ಸಮಯದಲ್ಲಿ ರಾಜಕೀಯ ಪಕ್ಷಗಳು ಸುಮ್ಮನಿದ್ದು ಇದೀಗ ಹೊರಗೆ ವದಂತಿಗಳನ್ನು ಸೃಷ್ಟಿಸುತ್ತಿವೆ ಎಂದರು.

Leave a Reply

Your email address will not be published. Required fields are marked *

error: Content is protected !!