ಶಿಕ್ಷಕರ ವರ್ಗಾವಣೆಗಾಗಿ ನಡೆಯುತ್ತಿದೆ ಬ್ರಹ್ಮಾಂಡ ಭ್ರಷ್ಟಚಾರ : ಎಸಿಬಿಗೆ ದೂರು ನೀಡಲು ಚಿಂತನೆ
ಉಡುಪಿ: ಪಂಚನಬೆಟ್ಟು ವಿದ್ಯಾವರ್ಧಕ ಪ್ರೌಢಶಾಲೆಯ ಎಲ್ಲ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬಂದಿಯನ್ನು ಶಿಕ್ಷಣ ಸಂಸ್ಥೆಯ ಅನುಮತಿಯಿಲ್ಲದೆ ಕೌನ್ಸೆಲಿಂಗ್ ಮೂಲಕ ಶಿಕ್ಷಕ ವರ್ಗ ಹಾಗೂ ಶಿಕ್ಷಕೇತರ ಸಿಬಂದಿಯನ್ನು ವರ್ಗಾಯಿಸಲಾಗಿದೆ. ಇದನ್ನೂ ಖಂಡಿಸಿ ಡಿಡಿಪಿಐ ಕಚೇರಿ ಆವರಣದಲ್ಲಿ ಪಂಚನಬೆಟ್ಟು ವಿದ್ಯಾವರ್ಧಕ ಆಡಳಿತ ಸಮಿತಿ, ಹಳೆ ವಿದ್ಯಾರ್ಥಿಗಳು, ಸಮಸ್ಥ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತೇವೆ ಎಂದು ಪಂಚನಬೆಟ್ಟು ವಿದ್ಯಾವರ್ಧಕ ಆಡಳಿತ ಸಮಿತಿ ಅಧ್ಯಕ್ಷ ಎ.ನರಸಿಂಹ ಎಚ್ಚರಿಕೆ ನೀಡಿದ್ದಾರೆ.
ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ವಿದೆ,ನಮ್ಮ ಶಿಕ್ಷಕರು ಯಾರು ಯಾವುದೇ ಲಂಚ ನೀಡಲ್ಲ ಮತ್ತು ಅವರು ಕೆಲವೊಂದು ಶಿಕ್ಷಕರಿಂದ ಲಂಚ ಪಡೆದು ನಮ್ಮ ಶಾಲೆಗೆ ಶಿಕ್ಷಕರನ್ನು ವರ್ಗಾಸಿದ್ದಾರೆಂದು ಆರೋಪ ವ್ಯಕ್ತಪಡಿಸಿದರು. ಈ ಬಗ್ಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 29 ವರ್ಷದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಾ ಬಂದಿದೆ. ಪ್ರಸ್ತುತ ಶಿಕ್ಷಣ ಸಂಸ್ಥೆಯಲ್ಲಿ 42 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಅವರಿಗಾಗಿ ಪಂಚನಬೆಟ್ಟು ವಿದ್ಯಾವರ್ಧಕ ಸಂಘದಿಂದ ಉಚಿತ ವಸತಿ, ಊಟ, ಸಮವಸ್ತ್ರ, ಪಠ್ಯಪುಸ್ತಕ ಕಲ್ಪಿಸಲಾಗಿದೆ. ನಮ್ಮೂರಿನ ಶಾಲೆ ನಮಗೆ ಕಣ್ಣುಗಳಿದ್ದಂತೆ, ಯಾವುದೇ ಕಾರಣಕ್ಕೂ ನಾವು ಶಾಲೆ ಮುಚ್ಚುದನ್ನು ಬಿಡುವುದಿಲ್ಲ. ಶಾಲೆಯಲ್ಲಿ ಈ ಬಾರಿ 8ನೇ ತರಗತಿಗೆ 22 ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ 2019-20ನೇ ಸಾಲಿನಲ್ಲಿ ಶಾಲೆ ಪ್ರಾರಂಭಕ್ಕೆ ಅನುಮತಿ ನೀಡಿದ್ದರು, ಆದರೆ ಏಕಾಏಕಿ ಶಾಲೆಯ ಎಲ್ಲ 5 ಶಿಕ್ಷಕ ಹಾಗೂ 1 ಸಿಬಂದಿಯನ್ನು ಬೇರೆ ಕಡೆ ವರ್ಗಾಯಿಸಲು ಕೌನ್ಸಿಲಿಂಗ್ ಮಾಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಶಿಕ್ಷಣ ಇಲಾಖೆ ಚೆಲ್ಲಾಟವಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಆಡಳಿತ ಸಮಿತಿ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಸದಸ್ಯ ಸಂದೇಶ್, ಅಶೋಕ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯ ಶೆಟ್ಟಿ ಇದ್ದರು.